ಕೊರೊನಾ ಹರಡುವ ಆತಂಕ : ಮೈಸೂರು-ಕೇರಳ ಸಂಚಾರ ಬಂದ್​!

ನೆರೆ ರಾಜ್ಯ ಕೇರಳದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು ಕರ್ನಾಟಕ ಗಡಿ ಭಾಗಗಳಲ್ಲಿ ಸೋಂಕು ಹರಡುವ ಭೀತಿ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಮೈಸೂರು ಹಾಗೂ ಕೇರಳ ನಡುವೆ ಸಂಚಾರವನ್ನು ಅಕ್ಟೋಬರ್ ಅಂತ್ಯದವರೆಗೆ ನಿರ್ಬಂಧಿಸಲಾಗಿದೆ.

ಕೋವಿಡ್​ ಹಾಗೂ ನಿಫಾ ವೈರಸ್ ಆತಂಕದ ಹಿನ್ನೆಲೆಯಲ್ಲಿ ಸೆ.7ರಿಂದ ಆ್ಯಂಬುಲೆನ್ಸ್ ಹಾಗೂ ಗೂಡ್ಸ್ ವಾಹನ ಹೊರತುಪಡಿಸಿ ಎಲ್ಲ ಸಂಚಾರಕ್ಕೆ ನಿರ್ಬಂಧ ವಿಧಿಸಿ ಸರ್ಕಾರ ಆದೇಶ ಹೊರಡಿಸಿದೆ.

ಕೋವಿಡ್ ಮೂರನೇ ಅಲೆ ಹಾಗೂ ನಿಫಾ ವೈರಸ್ ಆತಂಕದಿಂದ ಸೆ.7ರಿಂದ ಮೈಸೂರು ಹಾಗೂ ಕೇರಳ ನಡುವೆ ಅಕ್ಟೋಬರ್ ತಿಂಗಳ ಅಂತ್ಯದವರೆಗೆ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಆ್ಯಂಬುಲೆನ್ಸ್ ಹಾಗೂ ಗೂಡ್ಸ್ ವಾಹನಗಳಷ್ಟೇ ಅನುಮತಿ ಇದೆ ಎಂದು ಈ ಸಂಬಂಧ ಮೈಸೂರಿನ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕೆ.ಎಚ್.ಪ್ರಸಾದ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಮೈಸೂರಿನಿಂದ ಕೇರಳಕ್ಕೆ ಹೋಗಿರುವ ಹಾಗೂ ಕೇರಳದಿಂದ ಮೈಸೂರಿಗೆ ಬಂದಿರುವ ವಿದ್ಯಾರ್ಥಿಗಳು ಮತ್ತು ಉದ್ಯಮಿಗಳು ಅಲ್ಲಿಯೇ ವಾಸ್ತವ್ಯ ಮುಂದುವರೆಸಬೇಕು‌‌. ನಿಫಾ ವೈರಸ್ ಬಗ್ಗೆ ಬಾವಲಿ ಚೆಕ್ ಪೋಸ್ಟ್ ಬಳಿ ಇರುವ ಗ್ರಾಮ ಹಾಗೂ ಹಾಡಿ ಜನರಿಗೆ ಕರಪತ್ರ ನೀಡುವ ಮೂಲಕ ಅರಿವು ಮೂಡಿಸಲಾಗುತ್ತಿದೆ. ಅಲ್ಲದೆ ಲಸಿಕೆ ನೀಡಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಮಾಹಿತಿ ಕೊಟ್ಟಿದ್ದಾರೆ.
ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights