18 ವರ್ಷಗಳಲ್ಲಿ ದಾಖಲೆಯ ಮಳೆ – ದೆಹಲಿಯಲ್ಲಿ ಆರೆಂಜ್ ಅಲರ್ಟ್..!
ದೆಹಲಿದಲ್ಲಿ 18 ವರ್ಷಗಳಲ್ಲಿ ಅತಿ ಹೆಚ್ಚು ಮಳೆಯಾಗಿದ್ದು ಭಾರತೀಯ ಹವಾಮಾನ ಇಲಾಖೆ ನಗರದಾದ್ಯಂತ ಆರೆಂಜ್ ಅಲರ್ಟ್ ಘೋಷಿಸಿದೆ. ಶನಿವಾರ ಮುಂಜಾನೆಯಿಂದ ದೆಹಲಿಯಲ್ಲಿ ಭಾರೀ ಮಳೆಯಾಗುತ್ತಿದ್ದು 18 ವರ್ಷಗಳ ದಾಖಲೆಯನ್ನು ಮುರಿದಿದೆ.
2003 ರಲ್ಲಿ ದೆಹಲ್ಲಿ ದಾಖಲೆಯ ಮಳೆಯಾಗಿತ್ತು. ಈ ವರ್ಷ 2003ಕ್ಕಿಂತಲೂ ಅತೀ ಹೆಚ್ಚು ಮಳೆಯಾಗಿದೆ. ಮುಂಗಾರು ಮುಗಿಯಲು ಇನ್ನೂ ಐದು ದಿನಗಳು ಬಾಕಿ ಇರುವಾಗಲೇ ಈ ದಾಖಲೆಯ ಮಳೆಯಾಗಿದ್ದು ಇನ್ನುಳಿದ ದಿನಗಳಲ್ಲೂ ಅತೀ ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು ಆರೆಂಟ್ ಅಲರ್ಟ್ ಘೋಷಿಸಲಾಗಿದೆ.
ಸಫ್ದರ್ಜಂಗ್ ವೀಕ್ಷಣಾಲಯದ ಪ್ರಕಾರ, ದೆಹಲಿಯಲ್ಲಿ ಶುಕ್ರವಾರ ಬೆಳಿಗ್ಗೆ 8.30 ರಿಂದ ಶನಿವಾರ ಬೆಳಿಗ್ಗೆ 8.30 ರ ನಡುವೆ 94.7 ಮಿಮೀ ಮಳೆಯಾಗಿದೆ. ಶನಿವಾರ ಬೆಳಗ್ಗೆ 7 ರಿಂದ 10 ಗಂಟೆಯವರೆಗೆ ದೆಹಲಿಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ಶನಿವಾರ ಸುರಿದ ಭಾರೀ ಮಳೆಯಿಂದಾಗಿ ನಗರದ ವಿವಿಧ ಭಾಗಗಳಲ್ಲಿನ ವಿವಿಧ ರಸ್ತೆಗಳಲ್ಲಿ ನೀರು ನಿಂತಿದ್ದು, ರಸ್ತೆಗಳಲ್ಲಿ ನೀರು ಹರಿಯುವುದರಿಂದ ಸಂಚಾರ ಅಸ್ತವ್ಯಸ್ತವಾಗುವ ಬಗ್ಗೆ ಐಎಂಡಿ ಎಚ್ಚರಿಕೆ ನೀಡಿದೆ. ಜೊತೆಗೆ ಮಳೆಗಾಲದಲ್ಲಿ ಆಗಾಗ್ಗೆ ಪ್ರವಾಹಕ್ಕೆ ಸಿಲುಕುವ ಪ್ರದೇಶಗಳಿಗೆ ಹೋಗುವುದನ್ನು ತಪ್ಪಿಸಬೇಕು ಎಂದು ನಾಗರಿಕರಿಗೆ ಸೂಚಿಸಿದೆ. ಜೊತೆಗೆ ವಿದ್ಯುತ್ ಪೂರೈಕೆಯಲ್ಲಿ ಅಡಚಣೆಯಾಗುವ ಸಾಧ್ಯತೆಯೊಂದಿಗೆ ಹವಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.
ಈ ತಿಂಗಳ ಆರಂಭದಲ್ಲಿ ದೆಹಲಿಯಲ್ಲಿ ಕಳೆದ 19 ವರ್ಷಗಳಲ್ಲಿ ಸೆಪ್ಟೆಂಬರ್ನಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಐಎಂಡಿ ಹಿರಿಯ ವಿಜ್ಞಾನಿ ಆರ್ಕೆ ಜೆನಮಣಿ ಅವರು ಸೆಪ್ಟೆಂಬರ್ 1 ರಂದು ಸಂಭವಿಸಿದ ಮಳೆ ದೆಹಲಿಯಲ್ಲಿ ಸೆಪ್ಟೆಂಬರ್ನಲ್ಲಿ ಸುಮಾರು ಎರಡು ದಶಕಗಳಲ್ಲಿ ದಾಖಲಾದ ಅತಿ ಹೆಚ್ಚು ಮಳೆಯಾಗಿದೆ ಎಂದಿದ್ದಾರೆ.

