ಮುಂಬೈ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ : ಸಂತ್ರಸ್ತೆಯ ಸ್ಥಿತಿ ಗಂಭೀರ..!

ಮುಂಬೈನಲ್ಲಿ ನಿನ್ನೆ ನಡೆದ ಘನಘೋರ ಅತ್ಯಾಚಾರ ಪ್ರಕರಣದ ತನಿಖೆ ನಡೆಯುತ್ತಿದ್ದು ಓರ್ವ ಆರೋಪಿಯನ್ನು ಬಂಧಿಸಲಾಗಿದೆ. ಅತ್ಯಾಚಾರಕ್ಕೊಳಗಾದ ಮಹಿಳೆಯ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮುಂಬೈನ ಉಪನಗರ ಸಕಿನಾಕಾದಲ್ಲಿ ನಿಂತ ಟೆಂಪೋದಲ್ಲಿ 34 ವರ್ಷದ ಮಹಿಳೆ ಮೇಲೆ ಅತ್ಯಾಚಾರ ಮತ್ತು ಕ್ರೂರವಾಗಿ ಹಲ್ಲೆ ನಡೆಸಲಾಗಿದ್ದು ಆಕೆಯ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶುಕ್ರವಾರ ಮುಂಜಾನೆ ಖೈರಾನಿ ರಸ್ತೆಯಲ್ಲಿ ವ್ಯಕ್ತಿಯೊಬ್ಬ ಮಹಿಳೆಯನ್ನು ಥಳಿಸುತ್ತಿದ್ದಾನೆ ಎಂದು ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಬಂದಿತ್ತು. ಕರೆಯನ್ನು ಆಧರಿಸಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ರಕ್ತದ ಮಡುವಿನಲ್ಲಿ ಬಿದ್ದಿರುವ ಮಹಿಳೆಯ ಕಂಡು ಗಾಬರಿಯಾದ ಪೊಲೀಸರು ತಕ್ಷಣ ಆಕೆಯನ್ನು ನಾಗರಿಕರ ರಾಜವಾಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಮೋಹನ್ ಚೌಹಾಣ್ (45) ಎಂಬ ಆರೋಪಿಯನ್ನು ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಬಂಧಿಸಲಾಗಿದೆ.

ಪ್ರಾಥಮಿಕ ತನಿಖೆಯ ಪ್ರಕಾರ, ಮಹಿಳೆಯ ಮೇಲೆ ಅತ್ಯಾಚಾರವೆಸಗಿ ಆಕೆಯ ಖಾಸಗಿ ಭಾಗಗಳಲ್ಲಿ ಕಬ್ಬಿಣದ ರಾಡ್ ಸೇರಿಸಲಾಗಿದೆ. ರಸ್ತೆಬದಿಯಲ್ಲಿ ನಿಲ್ಲಿಸಿದ್ದ ಟೆಂಪೋವೊಂದರಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ವಾಹನದ ಒಳಗೆ ರಕ್ತದ ಕಲೆಗಳು ಸಹ ಕಂಡುಬಂದಿವೆ. ವೈದ್ಯರ ಪ್ರಕಾರ ಮಹಿಳೆಯ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಂಧಿತ ಆರೋಪಿ ಚೌಹಾಣ್ ವಿರುದ್ಧ ಐಪಿಸಿ ಸೆಕ್ಷನ್ 307 (ಕೊಲೆ ಯತ್ನ) ಮತ್ತು 376 (ಅತ್ಯಾಚಾರ) ಅಡಿಯಲ್ಲಿ ಕೇಸ್ ದಾಖಲಿಸಲಾಗಿದ್ದು ಹೆಚ್ಚಿನ ತನಿಖೆ ನಡೆಯುತ್ತಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights