ಮುಂಬೈ ದಾಳಿ ವೇಳೆ ಸಿಂಗ್‌ರನ್ನು ದುರ್ಬಲ ಎಂದ ಮಾಧ್ಯಮಗಳು ಪುಲ್ವಾಮ ದಾಳಿ ವೇಳೆ ಮೋದಿಯನ್ನು ಪ್ರಶ್ನಿಸಲಿಲ್ಲ: ರಾಹುಲ್‌ಗಾಂಧಿ

ಮುಂಬೈನಲ್ಲಿ ನಡೆದ ಭಯೋತ್ಪಾದಕ ದಾಳಿ ಸಂದರ್ಭದಲ್ಲಿ ಅಂದಿನ ಪ್ರಧಾನಿ ಮನಮೋಹನ್‌ ಸಿಂಗ್‌ ಅವರನ್ನು ದುರ್ಬಲ ಪ್ರಧಾನಿ ಎಂದು ಬಿಂಬಿಸಲಾಯಿತು. ಆದರೆ, ಪುಲ್ವಾಮ ದಾಳಿಯ ಸಂದರ್ಭದಲ್ಲಿ ಮಾಧ್ಯಮಗಳು ಪ್ರಧಾನಿ ನರೇಂದ್ರ ಮೋದಿಯನ್ನು ಪ್ರಶ್ನಿಸಲಿಲ್ಲ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ಗಾಂಧಿ ಅಸಮಾಧಾನ ಹೊರಹಾಕಿದ್ದಾರೆ.

ನ್ಯಾಷನಲ್‌ ಸ್ಟೂಡೆಂಟ್ಸ್ ಯೂನಿಯನ್‌ ಆಫ್‌ ಇಂಡಿಯಾದ (ಎನ್‌ಎಸ್‌ಯುಐ) ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ಕಳೆದ 70 ವರ್ಷಗಳಲ್ಲಿ ಕಾಂಗ್ರೆಸ್‌ ನೇತೃತ್ವದ ಸರ್ಕಾರಗಳು ಕಟ್ಟಿ-ಬೆಳೆಸಿದ ಸಂಸ್ಥೆಗಳು-ಆಸ್ತಿಗಳನ್ನು ಬಿಜೆಪಿ ಸರ್ಕಾರ ಕೇವಲ 7 ವರ್ಷಗಳಲ್ಲಿ ಮಾರಾಟ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಪಕ್ಷ ಯಾವಾಗಲೂ ದೇಶ ಕಟ್ಟುವತ್ತ ಗಮನ ಹರಿಸುತ್ತದೆ. ಆದರೆ, ಬಿಜೆಪಿ ದೇಶವನ್ನು ವಿನಾಶದತ್ತ ಕೊಂಡೊಯ್ಯುತ್ತಿದೆ. ನಮ್ಮ ಪಕ್ಷದ 70 ವರ್ಷಗಳ ಶ್ರಮವನ್ನು ಬಿಜೆಪಿಯವರು ಕೇವಲ ಏಳು ವರ್ಷಗಳಲ್ಲಿ ಮಾರಾಟ ಮಾಡಿದ್ದಾರೆ ಎಂದು ರಾಹುಲ್‌ ಕಿಡಿಕಾರಿದ್ದಾರೆ.

ಪ್ರಸ್ತುತ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆ ಅಪಾಯದಲ್ಲಿದೆ. ಬಿಜೆಪಿ ಸರ್ಕಾರ ರೈತರ ಮಾತನ್ನು ಕೇಳುತ್ತಿಲ್ಲ. ಅವರ ಬೇಡಿಕೆಗಳನ್ನು ಈಡೇರಿಸುತ್ತಿಲ್ಲ. ಬದಲಾಗಿ ಪ್ರತಿಪಕ್ಷಗಳ ಧ್ವನಿ ಅಡಗಿಸಲು ನಿರಂತರವಾಗಿ ಪ್ರಯತ್ನಿಸುತ್ತಿದೆ ಎಂದು ರಾಜ್ಯಸಭಾ ಸಂಸದ ದೀಪೇಂದರ್ ಸಿಂಗ್ ಹೂಡಾ ಆರೋಪಿಸಿದ್ದಾರೆ.

ಇದನ್ನೂ ಓದಿ: ಎದೆ ತುಂಬಿ ಹಾಡುವೆನು ಸ್ಪರ್ಧಿ ಮನವಿಗೆ ಸ್ಪಂದಿಸಿ ಬಸ್‌ ವ್ಯವಸ್ಥೆ ಕಲ್ಪಿಸಿದ ಸರ್ಕಾರ; ಸಮಸ್ಯೆ ಪರಿಹಾರಕ್ಕೂ ಟಿವಿ ವಾಹಿನಿ ವೇದಿಕೆಯೇ ಅಗತ್ಯವೇ?

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights