ಉತ್ತರ ಪ್ರದೇಶ ಮತ್ತು ಗೋವಾ ಚುನಾವಣೆಯಲ್ಲಿ ಶಿವಸೇನೆ ಸ್ಪರ್ಧಿಸುತ್ತದೆ: ಸಂಜಯ್ ರಾವತ್

ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ಉತ್ತರ ಪ್ರದೇಶ ಮತ್ತು ಗೋವಾ ವಿಧಾನಸಭಾ ಚುನಾವಣೆಯಲ್ಲಿ ಶಿವಸೇನೆ ಸ್ಪರ್ಧಿಸಲಿದೆ. ಪಶ್ಚಿಮ ಯುಪಿಯಲ್ಲಿ ರೈತ ಸಂಘಟನೆಗಳು ತಮ್ಮ ಪಕ್ಷವನ್ನು ಬೆಂಬಲಿಸಲು ಸಿದ್ಧರಿದ್ದಾರೆ ಎಂದು ಶಿವಸೇನೆಯ ಸಂಸದ ಸಂಜಯ್ ರಾವತ್ ಹೇಳಿದ್ದಾರೆ.

ಶಿವಸೇನೆ ಯುಪಿಯ 403 ಕ್ಷೇತ್ರಗಳ ಪೈಕಿ 80 ರಿಂದ 100 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತದೆ. ಗೋವಾ ವಿಧಾನಸಭೆಯ 40 ಸ್ಥಾನಗಳ ಪೈಕಿ 20 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ ಎಂದು ಅವರು ಹೇಳಿದ್ದಾರೆ.

“ಪಶ್ಚಿಮ ಯುಪಿಯ ರೈತ ಸಂಘಟನೆಗಳು ಶಿವಸೇನೆಯನ್ನು ಬೆಂಬಲಿಸಲು ತಮ್ಮ ಇಚ್ಛೆಯನ್ನು ವ್ಯಕ್ತಪಡಿಸಿವೆ. ನಾವು ಸಣ್ಣ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳಬಹುದು. ಗೋವಾದಲ್ಲಿ ಎಂವಿಎಯಂತಹ ರಚನೆಗೆ ಪ್ರಯತ್ನಗಳು ನಡೆಯುತ್ತಿವೆ. ನಾವು ಯಶಸ್ವಿಯಾಗುತ್ತೇವೆಯೇ ಎಂದು ನೋಡೋಣ” ಎಂದು ಅವರು ಹೇಳಿದ್ದಾರೆ.

ಶಿವಸೇನೆಯು ಈ ಎರಡು ರಾಜ್ಯಗಳಲ್ಲಿ ತನ್ನ ಕಾರ್ಯಕರ್ತರನ್ನು ಹೊಂದಿದೆ. ಯಶಸ್ಸು ಅಥವಾ ವೈಫಲ್ಯವನ್ನು ಲೆಕ್ಕಿಸದೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದೆ ಎಂದು ರೌತ್ ಹೇಳಿದ್ದಾರೆ.

2019ರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ನಂತರ, ಶಿವಸೇನೆ ಮುಖ್ಯಮಂತ್ರಿ ಸ್ಥಾನವನ್ನು ಹಂಚಿಕೊಳ್ಳುವ ವಿಷಯದಲ್ಲಿ ತನ್ನ ದೀರ್ಘಕಾಲದ ಮಿತ್ರ ಪಕ್ಷ ಬಿಜೆಪಿ ಜೊತೆಗಿನ ಸಂಬಂಧವನ್ನು ಕಡಿದುಕೊಂಡಿತು. ಅಲ್ಲದೆ, ರಾಜ್ಯದಲ್ಲಿ ಮಹಾ ವಿಕಾಸ ಅಘಡಿ (MVA) ಸರ್ಕಾರವನ್ನು ರಚಿಸಲು NCP ಮತ್ತು ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿತು.

ಇದನ್ನೂ ಓದಿ: ಗುಜರಾತ್ ಸಿಎಂ ವಿಜಯ್‌ ರೂಪಾನಿ ರಾಜೀನಾಮೆ; ಬಿಜೆಪಿ ಬಿಕ್ಕಟ್ಟಿನಲ್ಲಿ ಮತ್ತೊಬ್ಬ ಸಿಎಂ ಬದಲಾವಣೆ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.