ಗುಜರಾತ್ ನ ನೂತನ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಪ್ರಮಾಣವಚನ ಸ್ವೀಕಾರ!
ವಿಜಯ್ ರೂಪಾನಿ ನಿರ್ಗಮನದ ನಂತರ ಗುಜರಾತ್ ನೂತನ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಗುಜರಾತ್ ಬಿಜೆಪಿ ಶಾಸಕ ಭೂಪೇಂದ್ರ ಪಟೇಲ್ ಗುಜರಾತ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲರಾದ ಆಚಾರ್ಯ ದೇವವ್ರತ್, ಬಿಜೆಪಿ ನಾಯಕರಾದ ಅಮಿತ್ ಶಾ, ಶಿವರಾಜ್ ಸಿಂಗ್ ಚೌಹಾಣ್ ಮತ್ತು ಇತರರ ನೇತೃತ್ವದಲ್ಲಿ ಭೂಪೇಂದ್ರ ಪಟೇಲ್ ಪ್ರಮಾಣವಚನ ಬೋಧಿಸಿದರು.
ವಿಜಯ್ ರೂಪಾನಿ ಶನಿವಾರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಅಹ್ಮದಾಬಾದ್ನ ಘಟ್ಲೋಡಿಯಾ ಕ್ಷೇತ್ರದಿಂದ ಮೊದಲ ಬಾರಿಗೆ ಶಾಸಕರಾಗಿರುವ ಭೂಪೇಂದ್ರ ಪಟೇಲ್, 2017 ರ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ 1.17 ಲಕ್ಷ ಮತಗಳನ್ನು ಪಡೆದು ಜಯಗಳಿಸಿದ್ದಾರೆ. ಮುಖ್ಯಮಂತ್ರಿಯಾಗಿ ನೇಮಕಗೊಂಡ ಭೂಪೇಂದ್ರ ಪಟೇಲ್ ಮುಂಬರುವ 2022 ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಮುನ್ನಡೆಸುವ ನಿರೀಕ್ಷೆಯಿದೆ.

