ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫರ್ನಾಂಡಿಸ್ ಇನ್ನಿಲ್ಲ..!

ಚಿಕಿತ್ಸೆ ಫಲಕಾರಿಯಾಗದೇ ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫರ್ನಾಂಡಿಸ್ ವಿಧಿವಶರಾಗಿದ್ದಾರೆ.

ಕಳೆದ ಕೆಲ ದಿನಗಳಿಂದ ಮಂಗಳೂರಿನ ಎನಪೋಯಾ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಆಸ್ಕರ್ ಫರ್ನಾಂಡಿಸ್ (80) ಅವರು ಐಸಿಯುನಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆ. ಜುಲೈ 19ರಂದು ಯೋಗ ಮಾಡುವಾಗ ಕಾಲು ಜಾರಿ ಬಿದ್ದು ತಲೆಗೆ ಬಲವಾಗಿ ಪೆಟ್ಟು ಆಗಿತ್ತು. ಮೆದುಳಿಗೆ ಬಲವಾಗಿ ಪೆಟ್ಟು ಬಿದ್ದು ಪ್ರಜ್ಞಾಹೀನ ಸ್ಥಿತಿಯಲ್ಲಿ ಇದ್ದರು.

ತಲೆಯಲ್ಲಿ ಬ್ಲೆಡ್ ಕ್ಲಾಟ್ ಆಗಿತ್ತು. ಯಶಸ್ವಿಯಾಗಿ ಶಸ್ತ್ರ ಚಿಕಿತ್ಸೆ ಕೂಡ ಮಾಡಲಾಗಿತ್ತು. ಕಾಂಗ್ರೆಸ್ ಹಿರಿಯ ಮುಖಂಡರು ಕೂಡ ಆಸತ್ರೆಗೆ ಬಂದು ಭೇಟಿ ಮಾಡಿದ್ದರು. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಕೂಡ ಕರೆ ಮೂಲಕ ಕುಟುಂಬಸ್ಥರೊಂದಿಗೆ ಮಾತನಾಡಿ ಆರೋಗ್ಯದ ಬಗ್ಗೆ ವಿಚಾರಣೆ ಮಾಡಿದ್ದರು. ಆದರೆ ಇಂದು ಅವರು ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ.

1941 ಮಾರ್ಚ್ 27ರಂದು ಹುಟ್ಟಿದ ಆಸ್ಕರ್ ಫರ್ನಾಂಡಿಸ್ ಉಡುಪಿ ಲೋಕಸಭಾ ಸದಸ್ಯರಾಗಿ 5 ಬಾರಿ ಆಯ್ಕೆಯಾಗಿದ್ದರು. ದಿವಂಗತ ರಾಜೀವ್ ಗಾಂಧಿಯವರ ಆಪ್ತರಾಗಿದ್ದರು. ಸಂಸದರಾಗಿ, ಕೇಂದ್ರ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ.

ಆಸ್ಕರ್ ಫರ್ನಾಂಡಿಸ್ ಜನರಿಗೆ ಮಾಡಿದ ಸೇವೆ, ಅವರ ಸರಳತೆ ಮತ್ತು ಮೃದುತ್ವ ನೆನೆದು ರಾಜಕೀಯ ಗಣ್ಯರು ಕಂಬನಿ ಮಿಡಿದಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights