ಚಿಕ್ಕಮಗಳೂರು: ಅಪ್ರಾಪ್ತ ಬಾಲಕಿಯನ್ನು ಬೆದರಿಸಿ ಎರಡು ತಿಂಗಳು ನಿರಂತರ ಅತ್ಯಾಚಾರ; ಇಬ್ಬರ ಬಂಧನ

ಅಪ್ರಾಪ್ತ ಬಾಲಕಿ ಬಟ್ಟೆ ಬದಲಿಸುವಾಗ ಕದ್ದು ವೀಡಿಯೋ ಮಾಡಿಕೊಂಡು, ಆಕೆಯನ್ನು ಬೆದರಿಸಿ ಎರಡೂವರೆ ತಿಂಗಳಿಂದ ನಿರಂತರವಾಗಿ ಅತ್ಯಾಚಾರ ಎಸಗಿರುವ ಹೇಯ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣ ಸಮೀಪದ ಹಳ್ಳಿಯೊಂದರಲ್ಲಿ ನಡೆದಿದೆ.

ಅಪ್ರಾಪ್ತ ಬಾಲಕಿ ಬಟ್ಟೆ ಬದಲಿಸುವಾಗ ಅದೇ ಗ್ರಾಮದ ಯುವಕನೊಬ್ಬ ಕದ್ದು ವೀಡಿಯೋ ಮಾಡಿಕೊಂಡಿದ್ದಾನೆ. ಆಕೆಗೆ ವೀಡಿಯೋ ತೋರಿಸಿ, ತಾನು ಹೇಳಿದಂತೆ ಕೇಳದಿದ್ದರೆ ವೀಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ ಮಾಡುವುದಾಗಿ ಬೆದರಿಸಿ ಅತ್ಯಾಚಾರ ಎಸಗಿದ್ದಾನೆ.

ಎರಡೂವರೆ ತಿಂಗಳಿನ ನಂತರ ಕೃತ್ಯ ಬೆಳಕಿಗೆ ಬಂದಿದ್ದು, ಪ್ರಮುಖ ಆರೋಪಿ ಸೇರಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ, ಬಾಲಕಿ ಮೇಲೆ ಅತ್ಯಾಚಾರ ಎಸಗಲು ತನ್ನ ಮನೆಯಲ್ಲಿ ಅವಕಾಶ ಕೊಟ್ಟಿದ್ದ ಆರೋಪಿಯ ಸ್ನೇಹಿತರಿಬ್ಬರು ತಲೆಮರೆಸಿಕೊಂಡಿದ್ದು, ಅವರ ಬಂಧನಕ್ಕಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

ಬಾಲಕಿ ಬಟ್ಟೆ ಬದಲಿಸುವ ವೀಡಿಯೋವನ್ನು ಆರೋಪಿ ತನ್ನ ಸ್ನೇಹಿತರಿಗೂ ತೋರಿಸಿದ್ದು, ಬಾಲಕಿ ರಸ್ತೆಯಲ್ಲಿ ಓಡಾಡುವಾಗಲೂ ಆತನ ಸ್ನೇಹಿತರು ಚುಡಾಯಿಸುತ್ತಿದ್ದರು.

ಮನನೊಂದ ಬಾಲಕಿ ತನ್ನ ಚಿಕ್ಕಪ್ಪನಿಗೆ ಘಟನೆಯ ಬಗ್ಗೆ ಹೇಳಿದ್ದು, ಸಖರಾಯಪಟ್ಟಣದ ಠಾಣೆಗೆ ದೂರು ನೀಡಿದ್ದಾರೆ.  ಪ್ರಕರಣದ ಪ್ರಮುಖ ಆರೋಪಿ ಹಾಗೂ ಮತ್ತೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಅತ್ಯಾಚಾರಕ್ಕೆ ಮನೆ ನೀಡಿದ್ದವನು ಹಾಗೂ ರಸ್ತೆಯಲ್ಲಿ ಚೇಷ್ಟೆ ಮಾಡುತ್ತಿದ್ದನು ತಲೆಮರೆಸಿಕೊಂಡಿದ್ದಾರೆ.

ಇದನ್ನೂ ಓದಿ: ನಿದ್ರೆ ಮಾತ್ರೆ ನೀಡಿ ಅತ್ಯಾಚಾರವೆಸಗಿದ ಸ್ನೇಹಿತ : ವಿಡಿಯೋ ಮಾಡಿ ಯುವತಿಗೆ ಬೆದರಿಕೆ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights