ಬಂಗಾಳ ಬೈ ಎಲೆಕ್ಷನ್: ಮಮತಾ ನಾಮಪತ್ರದಲ್ಲಿ ಕ್ರಿಮಿನಲ್‌ ಪ್ರಕರಣಗಳ ವಿವರ ನೀಡಿಲ್ಲ: ಬಿಜೆಪಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಭವಾನಿಪುರ ಉಪಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದು, ಅವರು ಸಲ್ಲಿಸಿರುವ ನಾಮಪತ್ರದಲ್ಲಿ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಬಗ್ಗೆ ಉಲ್ಲೇಖಿಸಿಲ್ಲ ಎಂದು ಆರೋಪಿಸಿ ಬಿಜೆಪಿ ಮಂಗಳವಾರ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಮಮತಾ ವಿರುದ್ದ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ಪ್ರಿಯಾಂಕಾ ಟಿಬ್ರೆವಾಲ್ ಅವರ ಮುಖ್ಯ ಚುನಾವಣಾ ಏಜೆಂಟ್ ಸಜಲ್ ಘೋಷ್ ಅವರು ಬ್ಯಾನರ್ಜಿ ಅವರು ಸಲ್ಲಿಸಿರುವ ನಾಮಪತ್ರದ ವಿರುದ್ದ ಆಕ್ಷೇಪಗಳನ್ನು ಎತ್ತಿದ್ದು, ಇಸಿಗೆ ಪತ್ರ ಬರೆದಿದ್ದಾರೆ.

ಪತ್ರದಲ್ಲಿ “ಮಮತಾ ಬ್ಯಾನರ್ಜಿ ಸಲ್ಲಿಸಿರುವ ನಾಮಪತ್ರ/ಘೋಷಣೆಯನ್ನು ಆಕ್ಷೇಪಿಸಲು ನಾನು ಕೋರಿಕೊಳ್ಳುತ್ತೇನೆ. ಮಮತಾ ಅವರು ತನ್ನ ವಿರುದ್ಧ ಬಾಕಿ ಇರುವ ಕ್ರಿಮಿನಲ್ ವಿಚಾರಣೆಯ ವಿವರಗಳನ್ನು ಬಹಿರಂಗಪಡಿಸಲು ವಿಫಲವಾಗಿದ್ದಾರೆ” ಎಂದು ಆರೋಪಿಸಿದ್ದಾರೆ.

ಬ್ಯಾನರ್ಜಿ ವಿರುದ್ಧ ಅಸ್ಸಾಂನ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಪ್ರಕರಣಗಳ ಬಗ್ಗೆಯೂ ಘೋಷ್‌ ಅವರು ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ವಿಚಾರಕರು v/s RSS ಪ್ರಚಾರಕರು!

Spread the love

Leave a Reply

Your email address will not be published. Required fields are marked *