ನಟ ಸೋನು ಸೂದ್ ಕಚೇರಿಯಲ್ಲಿ ಆದಾಯ ತೆರಿಗೆ ಇಲಾಖೆಯಿಂದ ಸಮೀಕ್ಷೆ!

ಕೊರೊನಾ ಸಂದರ್ಭದಲ್ಲಿ ಕಾರ್ಮಿಕರಿಗೆ, ಮಕ್ಕಳಿಗೆ ನೆರವಾಗಿದ್ದ ನಟ ಸೋನು ಸೂದ್ ರ ಮುಂಬೈ ಕಚೇರಿಗೆ ಆದಾಯ ತೆರಿಗೆ ಅಧಿಕಾರಿಗಳು ಭೇಟಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಮುಂಬೈನಲ್ಲಿ ನಟ ಸೋನು ಸೂದ್ ಅವರ ಕಚೇರಿಯಲ್ಲಿ ಆದಾಯ ತೆರಿಗೆ ಇಲಾಖೆಯು ಸಮೀಕ್ಷೆ ನಡೆಸುತ್ತಿದೆ ಎನ್ನಲಾಗುತ್ತಿದೆ. ಇತ್ತೀಚೆಗೆ ದೆಹಲಿಯ ಆಡಳಿತಾರೂಢ ಆಮ್ ಆದ್ಮಿ ಪಕ್ಷಕ್ಕೆ ಸೋನು ಸೂದ್ ಸೇರುವ ಸಾಧ್ಯತೆಯ ಪ್ರಶ್ನೆಗಳಿಗೆ ಉತ್ತರಿಸಲು ನಿರಾಕರಿಸಿದರು. ಇದರ ನಡುವೆ ಆದಾಯ ತೆರಿಗೆ ಅಧಿಕಾರಿಗಳು ಭೇಟಿ ನೀಡಿರುವುದು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ.

ಕೊರೊನಾ ಸಾಂಕ್ರಾಮಿಕ, ಲಾಕ್‌ಡೌನ್‌ ಸಮಯದಲ್ಲಿ ಆಕ್ಸಿಜನ್ ಸೇರಿದಂತೆ ಅಗತ್ಯ ವಸ್ತುಗಳ ಪೂರೈಕೆಯಿಂದ ಹಿಡಿದು ಹಲವಾರು ಸಮಾಜಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಸೋನು ಸೂದ್ ಎಲ್ಲರ ಪಾಲಿನ ನೆಚ್ಚಿನ ಹೀರೋಗಳಲ್ಲಿ ಒಬ್ಬರು. ಸಿನಿಮಾಗಳಲ್ಲಿ ಹೆಚ್ಚು ವಿಲನ್‌ ಪಾತ್ರಗಳಲ್ಲಿ ಅಭಿನಯಿಸಿದ್ದರೂ, ನಿಜ ಜೀವನದಲ್ಲಿ ಹೀರೋ ಆಗಿದ್ದಾರೆ. ಕೊರೊನಾ ಸಮಯದಲ್ಲಿ ಅನೇಕ ಜನರಿಗೆ ಇವರು ಸಹಾಯ ಮಾಡಿದ್ದಾರೆ. ಈ ಹಿನ್ನೆಲೆ ಅವರು ಚುನಾವಣೆಗೆ ನಿಲ್ಲುತ್ತಾರೆ. ಯಾವುದಾದರೂ ಪಕ್ಷಕ್ಕೆ ಸೇರ್ಪಡೆಯಾಗುತ್ತಾರೆ ಎಂಬ ಮಾತುಗಳು ಆಗಾಗ್ಗೆ ಕೇಳಿ ಬರುತ್ತಿರುತ್ತದೆ. ಆದರೆ, ಈ ಬಗ್ಗೆ ಸ್ಪಷ್ಟನೆ ನೀಡಿದ ನಟ ಸೋನು ಸೂದ್‌, ತಾನು ಸದ್ಯ ಚುನಾವಣೆಗೆ ಧುಮುಕುವ ಯಾವುದೇ ಪ್ಲ್ಯಾನ್‌ ಇಲ್ಲ ಎಂದು ಹೇಳಿದ್ದರು.

ಆದರೆ ಸೋನು ಸೂದ್ ರ ಮುಂಬೈ ಕಚೇರಿಗೆ ಆದಾಯ ತೆರಿಗೆ ಅಧಿಕಾರಿಗಳ ಹಠಾತ್ ದಾಳಿ ಹಲವಾರು ಪ್ರಶ್ನೆಯನ್ನು ಹುಟ್ಟುಹಾಕಿವೆ.

 

Spread the love

Leave a Reply

Your email address will not be published. Required fields are marked *