ನಗರದಲ್ಲಿ ಮತ್ತೊಂದು ಭೀಕರ ಅಪಘಾತ : ಬೈಕ್ ಗಳಿಗೆ ಗುದ್ದಿದ ಟಿಟಿ ವಾಹನ – ಓರ್ವ ಸಾವು!

ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು ಎರಡು ಬೈಕ್ ಗಳಿಗೆ ಟಿಟಿ ವಾಹನ ಡಿಕ್ಕಿ ಹೊಡೆದು ಓರ್ವ ಬೈಕ್ ಸವಾರ ಮೃತಪಟ್ಟಿದ್ದು ಇನ್ನಿಬ್ಬರ ಸ್ಥಿತಿ ಗಂಭೀರವಾಗಿದೆ.

ಕಳೆದ ಕೆಲ ವಾರಗಳಿಂದ ಬೆಂಗಳೂರಿನಲ್ಲಿ ಸರಣಿ ಅಪಘಾತಗಳು ನಡೆಯುತ್ತಿವೆ. ಕೋರಮಂಗಲದಲ್ಲಿ ಭೀಕರ ಅಪಘಾತದಲ್ಲಿ 7 ಜನ ಸಾವನ್ನಪ್ಪಿದ್ದ ದುರಂತ ಘಟನೆ ಮರೆಯುವ ಹೊತ್ತಿಗೆ ನಿನ್ನೆ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಅಪಘಾತ ಸಂಭವಿಸಿದೆ.

ಈ ದುರಂತದಲ್ಲಿ ಕಾರ್ ಚಾಲಕ ಹಾಗೂ ತಮಿಳುನಾಡು ಮೂಲದ ಯುವಕ ಯುವತಿ ಸಾವನ್ನಪ್ಪಿದ್ದಾರೆ. ಿದಾದ 24 ಗಂಟೆಯಲ್ಲೇ ನಗರದ ಟಿ ದಾಸರಹಳ್ಳಿ ಚೊಕ್ಕಸಂದ್ರದಲ್ಲಿ ಮತ್ತೊಂದು ಅಪಘಾತ ಸಿಲಿಕಾನ್ ಸಿಟಿ ಜನರನ್ನು ಬೆಚ್ಚಿಬೀಳಿಸಿದೆ.

ಟಿ ದಾಸರಹಳ್ಳಿ ಚೊಕ್ಕಸಂದ್ರನ ಬಳಿ ಶರವೇಗವಾಗಿ ಬಂದ ಟಿಟಿ ವಾಹನವೊಂದು ರಸ್ತೆಯಲ್ಲಿ ಸಾಗುತ್ತಿದ್ದ ಎರಡು ಬೈಕ್ ಗಳಿಗೆ ಡಿಕ್ಕಿ ಹೊಡೆದಿದೆ. ಅತೀ ವೇಗವಾಗಿ ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಓರ್ವ ಮೃತಪಟ್ಟಿದ್ದು ಇಬ್ಬರ ಸ್ಥಿತಿ ಗಂಭೀರವಾಗಿದೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights