ರಾಷ್ಟ್ರ ಧ್ವಜಕ್ಕೆ ಅವಮಾನ; ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ವಿರುದ್ಧ ಪ್ರಕರಣ ದಾಖಲು!

ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಅವರ ಪಾರ್ಥಿವ ಶರೀರಕ್ಕೆ ಗೌರವ ಸಲ್ಲಿಸುವಾಗ ರಾಷ್ಟ್ರ ಧ್ವಜಕ್ಕೆ ಅವಮಾನ ಮಾಡಿದ ಆರೋಪದ ಮೇಲೆ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ವಿರುದ್ಧ ಪ್ರಕರಣ ದಾಖಲಾಗಿದೆ.

ಆಗಸ್ಟ್ 22 ರಂದು ಮೃತಪಟ್ಟ ಕಲ್ಯಾಣ್ ಸಿಂಗ್ ಅವರಿಗೆ ನಮನ ಸಲ್ಲಿಸುವ ವೇಳೆ ರಾಷ್ಟ್ರ ಧ್ವಜಕ್ಕೆ ನಡ್ಡಾ ಅವರು ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿ ಸಿಕಂದರ್‌ಪುರದ ನಿವಾಸಿ ಚಂದ್ರ ಕಿಶೋರ್ ಪರಾಶರ್ ಅವರು ಮುಝಫರ್‌ಪುರ ಮುಖ್ಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಅಂತ್ಯಕ್ರಿಯೆಗೂ ಮುನ್ನ ಕಲ್ಯಾಣ್ ಸಿಂಗ್ ಅವರ ಪಾರ್ಥಿವ ಶರೀರದ ಮೇಲೆ ಹೊದಿಸಿದ್ದ ತ್ರಿವರ್ಣ ಧ್ವಜದ ಮೇಲೆ ಬಿಜೆಪಿ ಧ್ವಜವನ್ನು ಇಟ್ಟಿದ್ದರಿಂದ ಅವರು ರಾಷ್ಟ್ರ ಧ್ವಜಕ್ಕೆ ಅಗೌರವ ತೋರಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

“ಬಿಜೆಪಿ ಇದನ್ನು ಉದ್ದೇಶಪೂರ್ವಕವಾಗಿ ಮಾಡಿದೆ. ನಡ್ಡಾ ಕೃತ್ಯವು ರಾಷ್ಟ್ರ ಧ್ವಜಕ್ಕೆ ಮಾಡಿದ ಅವಮಾನ” ಎಂದು ಅರ್ಜಿದಾರರು ಆರೋಪಿಸಿದ್ದು, ಘಟನೆಗೆ ಸಂಬಂಧಿಸಿದ ಕೆಲವು ಚಿತ್ರಗಳನ್ನು ಸಹ ಅರ್ಜಿಯೊಂದಿಗೆ ಸಲ್ಲಿಸಿದ್ದಾರೆ.

ನ್ಯಾಯಾಲಯವು ಪ್ರಕರಣದ ಬಗ್ಗೆ ಗಮನಹರಿಸಬೇಕಿದ್ದು, ವಿಚಾರಣೆಗೆ ದಿನಾಂಕವನ್ನು ಇನ್ನಷ್ಟೇ ನಿಗದಿಪಡಿಸಬೇಕಿದೆ.

ಇದನ್ನೂ ಓದಿ: ಬಂಗಾಳ ಬೈ ಎಲೆಕ್ಷನ್: ಮಮತಾ ನಾಮಪತ್ರದಲ್ಲಿ ಕ್ರಿಮಿನಲ್‌ ಪ್ರಕರಣಗಳ ವಿವರ ನೀಡಿಲ್ಲ: ಬಿಜೆಪಿ ಆರೋಪ

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights