ಸ್ವಯಂ ನಿವೃತ್ತಿಗಾಗಿ ಸರ್ಕಾರಕ್ಕೆ ಅರ್ಜಿ ಸಲ್ಲಿಸಿದ ಎಡಿಜಿಪಿ ಭಾಸ್ಕರ್ ರಾವ್; ಕಾಂಗ್ರೆಸ್‌ ಅಥವಾ ಎಎಪಿ ಸೇರುವ ಸಾಧ್ಯತೆ?

ರೈಲ್ವೆ ಪೊಲೀಸ್ ಎಡಿಜಿಪಿ ಆಗಿರುವ ಭಾಸ್ಕರ್ ರಾವ್ ಅವರ ಸೇವಾ ಅವಧಿ ಇನ್ನೂ ಮೂರು ವರ್ಷಗಳು ಇರುವಾಗಲೇ ಅವರು ಸ್ವಯಂ ನಿವೃತ್ತಿ ಬಯಸಿ ರಾಜ್ಯ ಸರ್ಕಾರಕ್ಕೆ ಅರ್ಜಿ ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ.

‘ವೈಯಕ್ತಿಕ ಕಾರಣ ನೀಡಿ ವಿಆರ್‌ಎಸ್‌ ಪಡೆಯುತ್ತಿದ್ದು, ಅದಕ್ಕಾಗಿ ಸರ್ಕಾರಕ್ಕೆ ಅರ್ಜಿ ಸಲ್ಲಿಸಿದ್ದಾರೆ ಎಂದು ಹೇಳಲಾಗಿದ್ದು, ಸರ್ಕಾರ ಅವರ ಅರ್ಜಿಯನ್ನು ಪರಿಗಣಿಸಿದರೆ, ಅವರು ರಾಜಕೀಯಕ್ಕೆ ಪ್ರವೇಶಿಸಬಹುದು ಎಂದು ಹೇಳಲಾಗುತ್ತಿದೆ.

ಕೆಲ ತಿಂಗಳಗಳ ಹಿಂದೆಯಷ್ಟೇ ಎಡಿಜಿಪಿ ಸಂಜಯ್ ಸಹಾಯ್ ಅವರೂ ಕೂಡ ಸ್ವಯಂ ನಿವೃತ್ತಿ ಪಡೆದಿದ್ದಾರೆ.

ಇದೀಗ, ಭಾಸ್ಕರ್‌ ಅವರೂ ಕೂಡ ಸ್ವಯಂ ನಿವೃತ್ತಿಗೆ ಅರ್ಜಿ ಸಲ್ಲಿಸಿದ್ದಾರೆ. ಅವರು ರಾಷ್ಟ್ರೀಯ ಪಕ್ಷವೊಂದಕ್ಕೆ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಮಾತ್ರವಲ್ಲದೆ, ಅವರು 2023ರ ವಿಧಾನಸಭಾ ಚುನಾವಣೆಗೆ ಬೆಂಗಳೂರಿನ ಬಸವನಗುಡಿ ಅಥವಾ ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಬಗ್ಗೆಯೂ ಅಭಿಪ್ರಾಯಗಳು ಕೇಳಿಬಂದಿವೆ.

ಭಾಸ್ಕರ್ ರಾವ್ ಅವರು ಕಾಂಗ್ರೆಸ್ ಅಥವಾ ಆಮ್‌ ಆದ್ಮಿ ಪಾರ್ಟಿಗೆ ಸೇರಬಹುದು ಎಂದು ಮೂಲಗಳು ಹೇಳಿವೆ.

ಅರ್ಥಶಾಸ್ತ್ರ ವಿಷಯದಲ್ಲಿ ಎಂ.ಎ ಪಡೆದಿದ್ದ ಭಾಸ್ಕರ್ ರಾವ್ , 1990ನೇ ಐಪಿಎಸ್ ಬ್ಯಾಚ್ ಅಧಿಕಾರಿ ಆಗಿ ಸೇವೆ ಆರಂಭಿಸಿದ್ದರು. ಬೆಂಗಳೂರು ಪೊಲೀಸ್ ಕಮಿಷನರ್ ಆಗಿಯೂ ಕೆಲಸ ಮಾಡಿದ್ದರು. ಸದ್ಯ ರೈಲ್ವೆ ಪೊಲೀಸ್ ವಿಭಾಗದ ಎಡಿಜಿಪಿ ಆಗಿದ್ದಾರೆ.

ಇದನ್ನೂ ಓದಿ: ಅಣ್ಣಾಮಲೈ ಹಾದಿಯಲ್ಲಿ ಮತ್ತೊಬ್ಬ IPS; ಬಿಜೆಪಿ ನಾಯಕರನ್ನು ಭೇಟಿಯಾದ ರವಿ ಚನ್ನಣ್ಣನವರ್‌!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights