ಗಣೇಶ ಹಬ್ಬದ ಬಳಿಕ ರಾಜ್ಯದಲ್ಲಿ ಕೊರೊನಾ ಸ್ಪೋಟ : ಏಕಾಏಕಿ ಸೋಂಕಿತರ ಸಂಖ್ಯೆ ಉಲ್ಬಣ!

ಗಣೇಶ ಹಬ್ಬದ ನಂತರ ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಇದು ಮೂರನೇ ಅಲೆಯ ಸೂಚನೆಯಾ ಎನ್ನುವ ಆತಂಕ ಜನರಲ್ಲಿ ಮನೆ ಮಾಡಿದೆ.

ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 1116 ಜನರಲ್ಲಿ ಕೊರೊನಾ ಸೋಂಕು ಕಾಣಿಸಿಇಕೊಂಡಿದೆ. ರಾಜ್ಯದಲ್ಲಿ ಕಳೆದ ಎರಡು ದಿನಗಳ ಹಿಂದೆ 559 ಕೇಸ್ ದಾಖಲಾಗಿತ್ತು. ಆದರೆ ಒಂದೇ ದಿನದಲ್ಲಿ 700 ಕೇಸ್ ಹೆಚ್ಚಾಗಿದೆ.

ಹೊಸದಾಗಿ ದಾಖಲಾದ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚು ಪ್ರಕರಣಗಳು ಬೆಂಗಳೂರಿನಲ್ಲಿ ದಾಖಲಾಗಿವೆ. ನಗರದಲ್ಲಿ ಮಂಗಳವಾರ 231 ಪ್ರಕರಣಗಳು ದಾಖಲಾಗಿದ್ದವು, ಈ ಸಂಖ್ಯೆ ನಿನ್ನೆಗೆ 462ಕ್ಕೇರಿಕೆಯಾಗಿದೆ. ಈ ಕಾರಣಕ್ಕೆ ರಾಜ್ಯದಲ್ಲಿ 1ರಿಂದ 5ನೇ ತರಗತಿ ತೆರೆಯಲು ಹಿಂದೇಟು ಹಾಲಾಗುತ್ತಿದೆ.

ಕೊರೊನಾ ಮೂರನೇ ಅಲೆ ಮಕ್ಕಳಿಗೆ ಹೆಚ್ಚು ಪರಿಣಾಮ ಬೀರುವ ಕಾರಣಪಾಲಿಕೆ ವ್ಯಾಪ್ತಿಯ ಶಾಲಾ ಮಕ್ಕಳಿಗೆ ಆರ್ಟಿ-ಪಿಸಿಆರ್ ಟೆಸ್ಟ್ ಮಾಡಲು ಬಿಬಿಎಂಪಿ ಟೆಕ್ನಿಕಲ್ ಕಮಿಟಿ ಸಭೆಯಲ್ಲಿ ಟೆಸ್ಟ್ ಗೆ ಸೂಚನೆ ನೀಡಲಾಗಿದೆ. 2 ದಿನಕ್ಕಿಂತ ಹೆಚ್ಚು ಕೋವಿಡ್ ರೋಗ ಲಕ್ಷಣಗಳಿದ್ದರೆ ಕೋವಿಡ್ ಟೆಸ್ಟ್ ಕಡ್ಡಾಯ ಎಂದು ಹೇಳಲಾಗಿದ್ದು ಬೆಂಗಳೂರಿನ ಎಲ್ಲಾ ಶಾಲೆಗಳಲ್ಲೂ ನೋಡಲ್ ಅಧಿಕಾರಿಗಳ ನೇಮಕ ಮಾಡಲಾಗಿದೆ.

ಶಾಲೆಗೆ ಹೋಗುವಂತ ಮಕ್ಕಳ ಬಗ್ಗೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಮಾಹಿತಿ ನೀಡಬೇಕು.ಆ ಮಕ್ಕಳ ಮನೆಗೆ ವೈದ್ಯಾಧಿಕಾರಿಗಳು ಹೋಗಿ ಮಕ್ಕಳನ್ನು ಪರೀಕ್ಷೆಗೆ ಒಳಪಡಿಸಿ ವರದಿ ನೀಡಬೇಕು.

ಎರಡು ಡೋಸ್ ಲಸಿಕೆ ಪಡೆದೂ ಸೋಂಕು ಬಂದರೆ ಜಿನೋವಿಕ್ ಟೆಸ್ಟ್ ಮಾಡಿಸಬೇಕು ಎಂದು ಬಿಬಿಎಂಪಿ ತಾಂತ್ರಿಕ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights