ಕೇರಳದಲ್ಲಿ ಹಿಡಿತಕ್ಕೆ ಬಾರದ ಕೊರೊನಾ : ಒಂದೇ ದಿನ 208 ಜನ ಸಾವು..!

ಕೇರಳದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು ನಿಯಂತ್ರಣಕ್ಕೆ ಬರುವಂತೆ ಕಾಣಿಸುತ್ತಿಲ್ಲ.

ಕಳೆದ 24 ಗಂಟೆಯಲ್ಲಿ ದೇಶದಲ್ಲೇ ಅತೀ ಹೆಚ್ಚು ಪ್ರಕರಣಗಳು ಕೇರಳದಲ್ಲಿ ದಾಖಲಾಗಿವೆ. ಕಳೆದ 24 ಗಂಟೆಯಲ್ಲಿ ಭಾರತದಲ್ಲಿ 30,570 ಹೊಸ ಕೋವಿಡ್ -19 ಪ್ರಕರಣಗಳು ದಾಖಲಾಗಿದ್ದು, 431 ಸಾವುಗಳು ದಾಖಲಾಗಿವೆ.

ದೇಶದಲ್ಲಿ ಈವರೆಗೆ ಒಟ್ಟು 3,33,47,325 ಪ್ರಕರಣಗಳು ದಾಖಲಾಗಿದ್ದು ಸಾವಿನ ಸಂಖ್ಯೆ 4,43,928ಕ್ಕೇರಿಕೆಯಾಗಿದೆ. ಕೊರೊನಾವೈರಸ್ ಪ್ರಕರಣಗಳನ್ನು ದಾಖಲಿಸಿದ ಮೊದಲ ಐದು ರಾಜ್ಯಗಳಲ್ಲಿ ಕೇರಳದಲ್ಲಿ 17,681 ಪ್ರಕರಣಗಳು, ಮಹಾರಾಷ್ಟ್ರದಲ್ಲಿ 3,783 ಪ್ರಕರಣಗಳು, ತಮಿಳುನಾಡಿನಲ್ಲಿ 1,658 ಪ್ರಕರಣಗಳು, ಆಂಧ್ರಪ್ರದೇಶದಲ್ಲಿ 1,445 ಪ್ರಕರಣಗಳು ಮತ್ತು ಮಿಜೋರಾಂನಲ್ಲಿ 1,402 ಪ್ರಕರಣಗಳು ದಾಖಲಾಗಿವೆ.

ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 431 ಜನರು ವೈರಸ್‌ಗೆ ಬಲಿಯಾಗಿದ್ದು, ಕೇರಳದಲ್ಲಿ ಗರಿಷ್ಠ ಸಾವುನೋವುಗಳು ವರದಿಯಾಗಿವೆ (208), ಮಹಾರಾಷ್ಟ್ರದಲ್ಲಿ 56 ಸಾವುಗಳು ದಾಖಲಾಗಿವೆ.

ಇದಲ್ಲದೇ ಕಳೆದ 24 ಗಂಟೆಗಳಲ್ಲಿ ಒಟ್ಟು 38,303 ರೋಗಿಗಳು ಚೇತರಿಸಿಕೊಂಡಿದ್ದು, ದೇಶಾದ್ಯಂತ ಒಟ್ಟು ಚೇತರಿಕೆ ಪ್ರಮಾಣ 3,25,60,474 ಕ್ಕೆ ತಲುಪಿದೆ. ದೇಶದ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 3,42,923 ರಷ್ಟಿದೆ.

ಕಳೆದ 24 ಗಂಟೆಗಳಲ್ಲಿ ಭಾರತ ಒಟ್ಟು 64,51,423 ಡೋಸ್‌ಗಳನ್ನು ನೀಡಿದೆ. ದೇಶದಲ್ಲಿ ಇದುವರೆಗೆ ಒಟ್ಟು 76,57,17,137 ಡೋಸ್‌ಗಳನ್ನು ನೀಡಲಾಗಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights