ವಿಶ್ವಕಪ್‌ ಬಳಿಕ T-20 ತಂಡದ ನಾಯಕತ್ವ ತ್ಯಜಿಸಲು ವಿರಾಟ್ ಕೊಹ್ಲಿ ನಿರ್ಧಾರ!

ಭಾರತದ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಮುಂಬರುವ ಟ್ವೆಂಟಿ-20 ವಿಶ್ವಕಪ್ ಬಳಿಕ T-20 ತಂಡದ ನಾಯಕ ಸ್ಥಾನದಿಂದ ಕೆಳಗಿಳಿಯುವುದಾಗಿ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, ನಾನು ದೇಶವನ್ನು ಪ್ರತಿನಿಧಿಸಿದ್ದು ಮಾತ್ರವಲ್ಲ ಭಾರತೀಯ ಕ್ರಿಕೆಟ್ ತಂಡವನ್ನು ಹೆಚ್ಚಿನ ಸಾಮರ್ಥ್ಯದೊಂದಿಗೆ ಮುನ್ನಡೆಸುವ ಅಪೂರ್ವ ಅವಕಾಶವೂ ಲಭಿಸಿದೆ. ಭಾರತ ಕ್ರಿಕೆಟ್ ತಂಡದ ನಾಯಕನಾಗಿ ನನ್ನ ಪಯಣದ ವೇಳೆ ನನ್ನನ್ನು ಬೆಂಬಲಿಸಿದವರಿಗೆ ಧನ್ಯವಾದ ತಿಳಿಸುವೆ.

ನಾನು ಕಳೆದ 8-9 ವರ್ಷಗಳಿಂದ ಎಲ್ಲ 3 ಮಾದರಿ ಕ್ರಿಕೆಟ್ ನಲ್ಲಿ ಆಡುತ್ತಿದ್ದು, ಕಳೆದ ಐದಾರು ವರ್ಷಗಳಿಂದ ನಿಯಮಿತವಾಗಿ ಎಲ್ಲ ಮೂರು ಮಾದರಿಯ ಕ್ರಿಕೆಟ್ ತಂಡದ ನಾಯಕತ್ವವನ್ನು ವಹಿಸಿಕೊಂಡಿರುವೆ. ಇದರಿಂದ ನನಗೆ ಕೆಲಸದ ಭಾರ ಅಧಿಕವಾಗಿದೆ. ನಾನು ಟೆಸ್ಟ್ ಹಾಗೂ ಏಕದಿನ ಕ್ರಿಕೆಟ್ ನಾಯಕತ್ವದತ್ತ ಸಂಪೂರ್ಣ ಗಮನ ಹರಿಸಲು ಬಯಸುವೆ. ಟಿ-20 ನಾಯಕನಾಗಿ ಸರ್ವ ಪ್ರಯತ್ನಮಾಡಿದ್ದೇನೆ. ನಾನು ಟಿ-20 ತಂಡದ ಬ್ಯಾಟ್ಸ್ ಮನ್ ಆಗಿ ಮುಂದುವರಿಯುವೆ.

ಅಕ್ಟೋಬರ್ ನಲ್ಲಿ ದುಬೈನಲ್ಲಿ ನಡೆಯಲಿರುವ ಟಿ-20 ವಿಶ್ವಕಪ್ ಬಳಿಕ ಟಿ-20 ತಂಡದ ನಾಯಕತ್ವವನ್ನು ತ್ಯಜಿಸಲು ನಿರ್ಧರಿಸಿದ್ದೇನೆ. ಕೋಚ್ ರವಿ ಶಾಸ್ತ್ರಿ ಹಾಗೂ ಸಹ ಆಟಗಾರ ರೋಹಿತ್ ಶರ್ಮಾ ಅವರೊಂದಿಗೆ ದೀರ್ಘ ಚರ್ಚೆ ನಡೆಸಿ ಈ ನಿರ್ಧಾರಕ್ಕೆ ಬಂದಿರುವೆ. ಈ ಕುರಿತಾಗಿ ಬಿಸಿಸಿಐ ಕಾರ್ಯದರ್ಶಿ ಜಯ ಶಾ ಹಾಗೂ ಅಧ್ಯಕ್ಷ ಸೌರವ್ ಗಂಗುಲಿಯವರೊಂದಿಗೆ ಮಾತನಾಡಿದ್ಧೇನೆ ಎಂದು ಕೊಹ್ಲಿ ಟ್ವಿಟರ್ ನಲ್ಲಿ ಬರೆದಿದ್ದಾರೆ.

https://twitter.com/imVkohli/status/1438478585518456832?s=20

ಇದನ್ನೂ ಓದಿ: ಟೀಂ ಇಂಡಿಯಾ ಕ್ಯಾಪ್ಟನ್ಸಿ ಬದಲಾವಣೆ?; ಬಿಸಿಸಿಐ ಸ್ಪಷ್ಟನೆ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights