ನಟ ದರ್ಶನ್ ಫಾರಂ ಹೌಸ್‌ನಲ್ಲಿ ಬಾಲಕಿ ಮೇಲೆ ಅತ್ಯಾಚಾರ; ಆರೋಪಿ ಬಂಧನ
ಮೈಸೂರಿನಲ್ಲಿರುವ ನಟ ದರ್ಶನ್ ಒಡೆತನದ ವಿನೇಶ್ ಫಾರಂ ಹೌಸ್‌ನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಮೈಸೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯಿದೆಯಡಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಟಿ. ನರಸೀಪುರ ರಸ್ತೆಯಲ್ಲಿರುವ ಫಾರಂ ಹೌಸ್‌ನಲ್ಲಿ ಕೆಲಸ ಮಾಡಿಕೊಂಡಿದ್ದ ಶಿವಮೊಗ್ಗ ಮೂಲದ ಕುಟುಂಬವೊಂದರ ಅಪ್ರಾಪ್ತೆ ಮೇಲೆ ಅದೇ ತೋಟದಲ್ಲಿ ಕುದುರೆ ಲಾಯದಲ್ಲಿ ಕೆಲಸ ಮಾಡಿಕೊಂಡಿದ್ದ ಕೆಲಸಗಾರನೊಬ್ಬ ಸೆ.13ರ ರಾತ್ರಿ ಅತ್ಯಾಚಾರ ನಡೆಸಿದ್ದಾನೆ ಎಂದು ಬಾಲಕಿಯ ತಾಯಿ ದೂರು ನೀಡಿದ್ದಾರೆ.
ತಾಯಿ, ತಂದೆ ಜೊತೆಗೆ 10 ವರ್ಷದ ಮಗಳು ಹಾಗೂ ಮಗನೊಬ್ಬನಿದ್ದ ಕುಟುಂಬ ದರ್ಶನ್ ಅವರ ಫಾಮ್ ಹೌಸ್‌ನಲ್ಲಿ ಕೂಲಿ ಕೆಲಸ ಮಾಡುತ್ತಿತ್ತು.ಅದೇ ಫಾರಂ ಹೌಸ್‌ನಲ್ಲಿ ಕುದುರೆಗೆ ಲಾಯ ಹೊಡೆಯುವ ಕೆಲಸ ಮಾಡುತ್ತಿದ್ದ ಬಿಹಾರ ಮೂಲದ ನಜೀಮ್ ಎಂಬಾತ ಬಾಲಕಿ ಮೇಲೆ ಸೆ. 13 ರಂದು ಅತ್ಯಾಚಾರ ಎಸಗಿದ್ದಾನೆ. ಅಲ್ಲದೆ, ಯಾರಿಗೂ ಹೇಳದಂತೆ ಬಾಲಕಿಗೆ ಬೆದರಿಕೆ ಹಾಕಿದ್ದಾನೆ. ಇದೀಗ ಪ್ರಕರಣ ಬೆಳಕಿಗೆ ಬಂದಿದೆ.
ಸಂತ್ರಸ್ತೆಯ ತಾಯಿ ನೀಡಿದ ದೂರಿನ ಆಧಾರಕದ ಮೇಲೆ ಪೋಕ್ಸೊ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಇದನ್ನೂ ಓದಿ: ಬೆಂಗಳೂರು: ಕೇವಲ 20 ರೂ.ಗಾಗಿ ಸ್ನೇಹಿತನ ಕೊಲೆ; ಮೂವರ ಬಂಧನ