ಚಲಿಸುತ್ತಿದ್ದ ರೈಲು ಹತ್ತಲು ಪ್ರಯತ್ನಿಸಿ ಬಿದ್ದ ವೃದ್ಧೆ : ಸಿಸಿಟಿವಿಯಲ್ಲಿ ಭಯಾನಕ ದೃಶ್ಯ ಸೆರೆ…!
ಮಹಾರಾಷ್ಟ್ರದಲ್ಲಿ ಚಲಿಸುತ್ತಿದ್ದ ರೈಲನ್ನು ಹತ್ತಲು ಹೋದ ವಯಸ್ಸಾದ ಮಹಿಳೆ ರೈಲಿನ ಮಧ್ಯೆ ಸಿಲುಕಿಕೊಂಡ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಪಾಲ್ಘರ್ ಜಿಲ್ಲೆಯ ವಸೈ ರೈಲ್ವೇ ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲಿನಿಂದ ಬಿದ್ದ 71 ವರ್ಷದ ವೃದ್ಧೆಯನ್ನು ಸಹ ಪ್ರಯಾಣಿಕರು ರಕ್ಷಿಸಿದ್ದಾರೆ ಎಂದು ಸೋಮವಾರ ಅಧಿಕಾರಿಗಳು ತಿಳಿಸಿದ್ದಾರೆ.
ತೆಲಂಗಾಣದ ಹೈದರಾಬಾದ್ ನಿವಾಸಿ, ಭಾವನಗರ-ಕಾಕಿನಾಡ ವಿಶೇಷ ರೈಲಿನಲ್ಲಿ ಶನಿವಾರ ಸಂಜೆ 5 ಗಂಟೆಗೆ ಹತ್ತಲು ಪ್ರಯತ್ನಿಸುತ್ತಿದ್ದಾಗ ಈ ಘಟನೆ ನಡೆದಿದೆ. ಈ ವೇಳೆ ವೃದ್ಧೆ ಆಯ ತಪ್ಪಿ ಕೆಳಗೆ ಬಿದ್ದು ಪ್ಲಾಟ್‌ಫಾರ್ಮ್ ಹಾಗೂ ರೈಲಿನ ಮಧ್ಯೆದ ಅಂತರದಲ್ಲಿ ಸಿಲುಕಿಕೊಂಡಿದ್ದರು. ಸಮಯಪ್ರಜ್ಞೆಯಿಂದ ಪ್ರಯಾಣಿಕರು ಚೈನ್ ಎಳೆದು ರೈಲನ್ನು ನಿಲ್ಲಿಸಿದ್ದಾರೆ.
ಇತ್ತ ಹೊರಗಡೆ ಸಿಲುಕಿದ್ದ ವೃದ್ಧೆಯನ್ನು ಸಹ ಪ್ರಯಾಣಿಕರು ರಕ್ಷಿಸಿದ್ದಾರೆ. ಘಟನೆಯ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದೆ. ವಿಡಿಯೋದಲ್ಲಿ ಇಬ್ಬರು ಸಹಪ್ರಯಾಣಿಕರು ವೃದ್ಧೆಯನ್ನು ಎಳೆದು ರಕ್ಷಿಸುವುದನ್ನು ಕಾಣಬಹುದು. ನಂತರ ಸ್ಥಳಕ್ಕೆ ಪೊಲೀಸರು ಆಗಮಿಸುವುದಿದೆ.
ಘಟನೆ ಬಳಿಕ ವೃದ್ಧೆಗೆ ಬೆನ್ನು ಮತ್ತು ಕಾಲಿನ ಮೇಲೆ ಗಾಯಗಳಾಗಿದ್ದು, ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಭಾನುವಾರ ಆಕೆಯನ್ನು ಡಿಸ್ಚಾರ್ಜ್ ಮಾಡಲಾಗಿದೆ ಎಂದು ಪಶ್ಚಿಮ ರೈಲ್ವೇ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.