ರೈತರು ಕರೆ ಕೊಟ್ಟಿರುವ ಸೆ. 27ರ ಭಾರತ್‌ ಬಂದ್‌ಗೆ ಅಖಿಲ ಭಾರತ ವಕೀಲರ ಒಕ್ಕೂಟ ಬೆಂಬಲ!

ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳ ವಿರುದ್ದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಅವರ ಹೋರಾಟ 10ನೇ ತಿಂಗಳು ಪೂರೈಸುತ್ತಿದ್ದು, ಈ ಹಿನ್ನಲೆಯಲ್ಲಿ ಹಾಗೂ ಭಗತ್‌ ಸಿಂಗ್‌ ಜನ್ಮದಿನದ ಭಾಗವಾಗಿ ರೈತ ಸಂಘಟನೆಗಳ ಒಕ್ಕೂಟ ಸಂಯುಕ್ತ ಕಿಸಾನ್ ಮೋರ್ಚಾ ಸೆಪ್ಟಂಬರ್‌ 27 ರಂದು ಭಾರತ್‌ ಬಂದ್‌ಗೆ ಕರೆ ನೀಡಿದೆ. ಈ ಬಂದ್‌ಗೆ ರಾಷ್ಟ್ರವ್ಯಾಪಿ ಬೆಂಬಲ ವ್ಯಕ್ತವಾಗಿದ್ದು, ಅಖಿಲ ಭಾರತ ವಕೀಲರ ಒಕ್ಕೂಟದ ಕರ್ನಾಟಕ ರಾಜ್ಯ ಸಮಿತಿ ಕೂಡ ಸಂಪೂರ್ಣ ಬೆಂಬಲ ನೀಡುವುದಾಗಿ ತಿಳಿಸಿದೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಖಿಲ ಭಾರತ ವಕೀಲರ ಒಕ್ಕೂಟದ ಕರ್ನಾಟಕ ರಾಜ್ಯ ಸಮಿತಿ, ಭಾರತ್ ಬಂದ್‌ಗೆ ಸಂಪೂರ್ಣ ಬೆಂಬಲ ನೀಡಿ ಬಂದ್‌ನಲ್ಲಿ ಭಾಗವಹಿಸುವುದಾಗಿ ತಿಳಿಸಿದೆ.

“ಭಾರತ ಸರ್ಕಾರದ ರೈತ ವಿರೋಧಿ ಕಾನೂನುಗಳನ್ನು ವಿರೋಧಿಸಿ ದೇಶದ ರೈತರು ಕಳೆದ 10 ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಐತರ ಬೇಡಿಕೆಗಳಿಗೆ ಸ್ಪಂದಿಸದೆ ಸರ್ಕಾರ ರೈತ ವಿರೋಧಿ ನಿಲುವುಗಳನ್ನು ಮುಂದುವರೆಸುತ್ತಿರುವುದು ದುರಾದೃಷ್ಟಕರ” ಎಂದಿದೆ”.

ಇದನ್ನೂ ಓದಿ: ಭಾರತದ ಕೃಷಿ ಕ್ಷೇತ್ರದ ಮೇಲೆ ಅಮೆಜಾನ್, ಮೈಕ್ರೋಸಾಫ್ಟ್‌ ಆಕ್ರಮಣ; ಅಮೆರಿಕಾದಲ್ಲಾಗಿದ್ದು, ಭಾರತದಲ್ಲಾಗುವುದಿಲ್ಲವೇ?

“ಸೆ. 27 ರಂದು ಹಲವು ರೈತ ಸಂಘಟನೆಗಳು ಒಗ್ಗೂಡಿ ರೈತ ವಿರೋಧಿ ಕೃಷಿ ಮಸೂದೆಗಳ ವಿರುದ್ಧ ಭಾರತ್ ಬಂದ್ ಗೆ ಕರೆ ನೀಡಿದ್ದು, ಸದರಿ ಕೃಷಿ ಮಸೂದೆಗಳಲ್ಲಿ ರೈತರ ಹಿತಾಸಕ್ತಿ ಯನ್ನು ಕಡೆಗಣಿಸಿ, ಕಾರ್ಪೊರೇಟ್ ಕಂಪನಿಗಳಿಗೆ ಅನುಕೂಲವಾಗುವಂತಹ ಹತ್ತಾರು ಅಂಶಗಳನ್ನು ಒಳಗೊಂಡಿದ್ದು ,ಈ ಕೃಷಿ ಕಾಯ್ದೆಗಳನ್ನು ಅಖಿಲ ಭಾರತ ವಕೀಲರ ಒಕ್ಕೂಟ (AILU ) ಕರ್ನಾಟಕ ರಾಜ್ಯ ಸಮಿತಿ ವಿರೋಧಿಸುತ್ತಿದ್ದು ಭಾರತ್ ಬಂದ್ ಅನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ” ಎಂದು ಹೇಳಿಕೆ ನೀಡಿದೆ.

ಭಾರತ್ ಬಂದ್: ರೈತರ ಕರೆಗೆ ಅಖಿಲ ಭಾರತ ವಕೀಲರ ಒಕ್ಕೂಟದ ಸಂಪೂರ್ಣ ಬೆಂಬಲ

ಭಾರತ್ ಬಂದ್‌ಗೆ ಎಸ್‌ಕೆಎಂ ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಬಂದ್‌ ಶಾಂತಿಯುತವಾಗಿರುತ್ತದೆ ಮತ್ತು ಜನರು ಯಾವುದೇ ಅನಾನುಕೂಲತೆಯನ್ನು ಅನುಭವಿಸದಂತೆ ರೈತರು ನೋಡಿಕೊಳ್ಳುತ್ತಾರೆ ಎಂದು ಹೇಳಿದೆ.

“ಒಕ್ಕೂಟ ಸರ್ಕಾರದ ರಾಜ್ಯ ಕಚೇರಿಗಳು, ಮಾರುಕಟ್ಟೆಗಳು, ಅಂಗಡಿಗಳು, ಕಾರ್ಖಾನೆಗಳು, ಶಾಲೆಗಳು, ಕಾಲೇಜುಗಳು ಮತ್ತು ಇತರ ಶಿಕ್ಷಣ ಸಂಸ್ಥೆಗಳು ಅಂದು ಬಂದ್‌ ಆಗಲಿದೆ. ಬಂದ್‌‌ ಬೆಳಿಗ್ಗೆ 6 ಗಂಟೆಯಿಂದ ಆರಂಭವಾಗಿ ಸಂಜೆ 4 ಗಂಟೆಯವರೆಗೆ ಜಾರಿಯಲ್ಲಿರುತ್ತದೆ” ಎಂದು ಎಸ್‌ಕೆಎಂ ಶುಕ್ರವಾರ ಬಿಡುಗಡೆ ಮಾಡಿರುವ ಮಾರ್ಗಸೂಚಿಯಲ್ಲಿ ತಿಳಿಸಿದೆ.

ಸೆ. 27 ರಂದು ರಾಜ್ಯದಲ್ಲಿ ಕರ್ನಾಟಕ ಬಂದ್ ನಡೆಸಲಾಗುತ್ತಿದ್ದು, “ ಕರ್ನಾಟಕದ ಎಲ್ಲಾ ಚಳುವಳಿಗಾರರು ರೈತ, ಕಾರ್ಮಿಕ, ಮಹಿಳಾ, ಕನ್ನಡಪರ, ವಿದ್ಯಾರ್ಥಿ, ಜನಪರ ಸಂಘಟನೆಗಳು ಈ ಬಂದ್‌ನಲ್ಲಿ ತೊಡಗಿಸಿಕೊಳ್ಳಬೇಕು. ನಮ್ಮ ಧ್ವಜಗಳನ್ನು ಹಿಡಿದು ಪ್ರತಿಭಟನೆಗೆ ಸಾಥ್ ನೀಡಬೇಕು” ಎಂದು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಕೃಷಿ ಕಾಯ್ದೆಗಳ ಸಮರ್ಥನೆಗಾಗಿ 8 ಕೋಟಿ ಖರ್ಚು ಮಾಡಿದೆ ಮೋದಿ ಸರ್ಕಾರ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights