15 ವರ್ಷದ ಬಾಲಕಿ ಮೇಲೆ ಅಪ್ರಾಪ್ತ ವಯಸ್ಕರು ಸೇರಿ 29 ಜನರಿಂದ ಸಾಮೂಹಿಕ ಅತ್ಯಾಚಾರ!

ಬಾಲಕಿ ಮೇಲೆ ಅಪ್ರಾಪ್ತ ವಯಸ್ಕರು ಸೇರಿ 29 ಜನರಿಂದ ಸಾಮೂಹಿಕ ಅತ್ಯಾಚಾರವೆಸಗಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

ಮಹಾರಾಷ್ಟ್ರದ ಡೊಂಬಿವಿಲಿ ಪ್ರದೇಶದಲ್ಲಿ 15 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಒಂಬತ್ತು ತಿಂಗಳ ಅವಧಿಯಲ್ಲಿ ಬಾಲಕಿ ಮೇಲೆ ಇಬ್ಬರು ಅಪ್ರಾಪ್ತ ವಯಸ್ಕರು ಸೇರಿದಂತೆ 29 ಜನರು ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ.

ಜನವರಿಯಲ್ಲಿ ಬಾಲಕಿಯ ಗೆಳೆಯ ಆಕೆಯ ಮೇಲೆ ಅತ್ಯಾಚಾರ ಎಸಗಿ ವಿಡಿಯೋ ಚಿತ್ರೀಕರಿಸಿದ್ದಾನೆ. ಇದೇ ವಿಡಿಯೋವನ್ನಿಟ್ಟುಕೊಂಡು ಇತರ ಆರೋಪಿಗಳು, ಸ್ನೇಹಿತರು ಬ್ಲ್ಯಾಕ್ ಮೇಲ್ ಮಾಡುವ ಮೂಲಕ ಸತತವಾಗಿ ಜಿಲ್ಲೆಯ ಡೊಂಬಿವಿಲಿ, ಬದ್ಲಾಪುರ, ಮುರ್ಬಾದ್ ಮತ್ತು ರಬಾಲೆ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತರು (ಪೂರ್ವ ಪ್ರದೇಶ), ದತ್ತಾತ್ರಯ್ ಕರಾಳೆ ಹೇಳಿದರು.

ಬಾಲಕಿಯ ದೂರಿನ ಆಧಾರದ ಮೇಲೆ 24 ಆರೋಪಿಗಳನ್ನು ಬಂಧಿಸಲಾಗಿದೆ. ಇವರಲ್ಲಿ ಇಬ್ಬರು ಹುಡುಗರು ಅಪ್ರಾಪ್ತರಾಗಿದ್ದಾರೆ. ಬಂಧಿತ ಆರೋಪಿಗಳು ರಾಜಕೀಯ ಪಕ್ಷದೊಂದಿಗೆ ಸಂಬಂಧ ಹೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ನಿನ್ನೆ ರಾತ್ರಿ ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 376(ಅತ್ಯಾಚಾರ) ಮತ್ತು ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಲಿಸಲಾಗಿದ್ದು ಇನ್ನುಳಿದ ಆರೋಪಿಗಳ ಪತ್ತೆಗಾಗಿ ಕಾರ್ಯಚರಣೆ ನಡೆಸಲಾಗಿದೆ.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights