ಜಮ್ಮು ಮತ್ತು ಕಾಶ್ಮೀರದಲ್ಲಿ ಸೈನಿಕ ಆತ್ಮಹತ್ಯೆ 

ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಸೇನಾ ಯೋಧರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ಸೇನೆಯ 6 ರಾಷ್ಟ್ರೀಯ ರೈಫಲ್ಸ್‌ನ ಲೋಕೀಂದರ್ ಸಿಂಗ್ ಅವರು ಬುಧವಾರ ರಾತ್ರಿ 10.30ರ ಸುಮಾರಿಗೆ ಗಡಿ ನಿಯಂತ್ರಣ ರೇಖೆ ಬಳಿಯ ಕೆರಾನ್ ಸೆಕ್ಟರ್‌ನಲ್ಲಿರುವ ಕ್ಯಾಂಪ್‌ನಲ್ಲಿ ತಮ್ಮ ಸೇವಾ ರೈಫಲ್‌ನಿಂದ ಗುಂಡು ಹಾರಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಿಂಗ್ ಅವರನ್ನು ಹತ್ತಿರದ ಮಿಲಿಟರಿ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಯಿತು, ದಾರಿ ಮಧ್ಯೆಯೇ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಯೋಧನ ಆತ್ಮಹತ್ಯೆಗೆ ಕಾರಣವೇನು ಎಂಬುದು ತಕ್ಷಣಕ್ಕೆ ತಳಿದು ಬಂದಿಲ್ಲ.

ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ಆರೋಗ್ಯ ಸಹಾಯವಾಣಿ 104.

ಇದನ್ನೂ ಓದಿ: ಮಲ್ಪೆ ಬೀಚ್‌ನಲ್ಲಿ ನೀರಿನಲ್ಲಿ ಮುಳುಗುತ್ತಿದ್ದ ಶಿವಮೊಗ್ಗದ ಮೂವರು ವಿದ್ಯಾರ್ಥಿಗಳ ರಕ್ಷಣೆ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights