ಬೆಂಗಳೂರು ನ್ಯೂ ತರಗುಪೇಟೆಯಲ್ಲಿ ನಿಗೂಢ ಸ್ಪೋಟಕ್ಕೆ ಕಾರಣವಾಯ್ತಾ ಪಟಾಕಿ ಪೆಟ್ಟಿಗೆ..?

ಬೆಂಗಳೂರಿನ ನ್ಯೂ ತರಗುಪೇಟೆಯಲ್ಲಿ ನಿಗೂಢ ಸ್ಪೋಟಕ್ಕೆ ಇಬ್ಬರು ಸಾವನ್ನಪ್ಪಿದ್ದು ಐವರು ಗಾಯಗೊಂಡಿದ್ದಾರೆ. ಸ್ಪೋಟದ ತೀವ್ರತೆಗೆ ಅಕ್ಕಪಕ್ಕ ಮನೆಯ ಕಿಟಕಿ ಗಾಜುಗಳು ಚೂರಾಗಿದ್ದು, 10ಕ್ಕೂ ಹೆಚ್ಚು ಬೈಕ್ ಸುಟ್ಟುಕರಕಲಾಗಿವೆ. ಈ ಸ್ಪೋಟಕ್ಕೆ ಕಾರಣ ಪಟಾಕಿ ಬಾಕ್ಸ್ ಎನ್ನಲಾಗುತ್ತಿದೆ.

ಬೆಂಗಳೂರಿನ ವಿವಿ ಪುರಂ ಪೊಲೀಸ್ ಠಾಣೆ ವ್ಯಾಪ್ತಿಯ ನ್ಯೂ ತರಗುಪೇಟೆಯಲ್ಲಿರುವ ಶ್ರೀ ಪತ್ರಕಾಳಿ ಲಾರಿ ಸರ್ವಿಸಸ್ ಗೋದಾಮಿನ ಒಳಗೆ ಇಂದು ಮಧ್ಯಾಹ್ನ 12:10 ಸುಮಾರಿಗೆ ಸಂಭವಿಸಿದ ಸ್ಫೋಟದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಇತರ 5 ಮಂದಿಗೆ ಸುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಪೋಟದ ತೀವ್ರತೆಗೆ ಎರಡು ಮೃತದೇಹಗಳು ಹಾರಿ ಛಿದ್ರ ಛಿದ್ರಗೊಂಡಿವೆ.

ಹಿರಿಯ ಪೊಲೀಸ್ ಮತ್ತು ಎಫ್ಎಸ್ಎಲ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಈ ಗೋದಾಮಿನಲ್ಲಿ 60 ಪಟಾಕಿ ಪೆಟ್ಟಿಗೆಗಳನ್ನು ಇರಿಸಲಾಗಿದ್ದು, ಒಂದು ರಿಂದ ಮೂರು ಪಟಾಕಿ ಬಾಕ್ಸ್ ಕೆಳಗೆ ಬಿದ್ದು ಸ್ಫೋಟ ಸಂಭವಿಸಿರಬಹುದು ಎನ್ನಲಾಗುತ್ತಿದೆ. LPG ಸೋರಿಕೆ ಅಥವಾ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಈ ಸ್ಪೋಟ ಸಂಭವಿಸರಬಹುದು ಎನ್ನುವ ಶಂಕೆಯನ್ನು ಅಧಿಕಾರಿಗಳು ತಳ್ಳಿ ಹಾಕಿದ್ದಾರೆ.

“ನಾವು ಗೋಡೌನ್ ಒಳಗೆ ಕೆಲವು ಕೈಗಾರಿಕಾ ಸರಕುಗಳನ್ನು ಕಂಡುಕೊಂಡಿದ್ದೇವೆ ಮತ್ತು FSL ನ ಅಭಿಪ್ರಾಯಕ್ಕಾಗಿ ಕಾಯುತ್ತಿದ್ದೇವೆ. ಪಟಾಕಿಗಳನ್ನು ಕಾನೂನುಬದ್ಧವಾಗಿ ಸಂಗ್ರಹಿಸಲಾಗಿದೆಯೇ ಅಥವಾ ಇಲ್ಲವೇ ಎಂಬುದನ್ನು ನಾವು ಪರಿಶೀಲಿಸುತ್ತಿದ್ದೇವೆ” ಎಂದು ದಕ್ಷಿಣ ವಿಭಾಗದ ಡಿಸಿಪಿ ಹರೀಶ್ ಪಾಂಡೆ ಹೇಳಿದರು.

ಮೃತರನ್ನು ಮನೋಹರ್ (29-ತಮಿಳುನಾಡು ಮೂಲದವನು), ಅಸ್ಲಂ (45), ಫಯಾಜ್(50) ಎಂದು ಗುರುತಿಸಲಾಗಿದೆ. ಮಂಜುನಾಥ್ ಮತ್ತು ಗಣಪತಿ ತೀವ್ರವಾಗಿ ಗಾಯಗೊಂಡಿದ್ದು, ಇತರ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಧ್ಯಾಹ್ನ 12.15 ರ ಸುಮಾರಿಗೆ ಸ್ಫೋಟ ಸಂಭವಿಸಿದ್ದು, ಪ್ರತ್ಯಕ್ಷದರ್ಶಿಯಾದ ಸುರೇಶ್ ಅವರು ಅಗ್ನಿಶಾಮಕ ಮತ್ತು ತುರ್ತು ಸೇವೆಗಳಿಗೆ ಕರೆ ಮಾಡಿದ್ದಾರೆ. ಪ್ರತ್ಯಕ್ಷದರ್ಶಿ ಸುದ್ದಿಗಾರರೊಂದಿಗೆ ಮಾತನಾಡಿದ ಸುರೇಶ್ , “ನಾನು ಗೋಡೌನ್ ಮುಂದೆ ಚಲಿಸುತ್ತಿದ್ದೆ ಮತ್ತು ಸ್ಫೋಟದ ಸದ್ದು ಕೇಳಿಸಿತು. ನಾನು ನನ್ನ ಬೈಕ್ ಅನ್ನು ಅಲ್ಲಿಯೇ ಬಿಟ್ಟು ಓಡಿದೆ. ಕೆಲವು ಸ್ಥಳೀಯರು ಗಾಯಾಳುಗಳನ್ನು ಹೊರಗೆ ಕರೆತಂದರು ಮತ್ತು ಆಂಬ್ಯುಲೆನ್ಸ್ ಕರೆ ಮಾಡಿ ಗಾಯಾಳುಗಳನ್ನು ಕಳುಹಿಸಿಕೊಟ್ಟಿದ್ದಾರೆ ” ಎಂದರು.

ಮೃತದೇಹಗಳನ್ನು ಬೌರಿಂಗ್ ಆಸ್ಪತ್ರೆಗೆ ಸಾಗಿಸಲಾಗಿದ್ದು, ಗಾಯಗೊಂಡವರು ಚೇತರಿಸಿಕೊಳ್ಳುತ್ತಿದ್ದಾರೆ. ಗೋಡೌನ್ ಮಾಲೀಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆತನ ವಿರುದ್ಧ ನಿರ್ಲಕ್ಷ್ಯದ ಪ್ರಕರಣ ದಾಖಲಿಸಿದ್ದಾರೆ. ಹೆಚ್ಚಿನ ತನಿಖೆ ನಡೆಸಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights