ಪ್ರಧಾನಿ ಮೋದಿ ಹಾಗೂ ಜೋ ಬಿಡೆನ್ ಭೇಟಿಗೂ ಮುನ್ನ ರೈತ ನಾಯಕ ರಾಕೇಶ್ ಟಿಕಾಯತ್ ಟ್ವೀಟ್!

ಪ್ರಧಾನಿ ಮೋದಿ ಹಾಗೂ ಅಮೇರಿಕಾ ಅಧ್ಯಕ್ಷ ಜೋ ಬಿಡೆನ್ ಭೇಟಿಗೂ ಮುನ್ನ ರೈತ ನಾಯಕ ರಾಕೇಶ್ ಟಿಕಾಯತ್ ಟ್ವೀಟ್ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಗೂ ಮುನ್ನ ಕೇಂದ್ರವು ಜಾರಿಗೆ ತಂದಿರುವ ವಿವಾದಾತ್ಮಕ ಕೃಷಿ ಕಾನೂನುಗಳ ಮೇಲೆ ಗಮನ ಕೇಂದ್ರೀಕರಿಸುವಂತೆ ರೈತ ನಾಯಕ ರಾಕೇಶ್ ಟಿಕೈತ್ ಇಂದು ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಅವರಿಗೆ ಮನವಿ ಮಾಡಿದ್ದಾರೆ.

ಮೂರು ಕೃಷಿ ಕಾನೂನುಗಳನ್ನು ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಕಳೆದ 11 ತಿಂಗಳಲ್ಲಿ ಕನಿಷ್ಠ 700 ರೈತರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ರೈತ ಮುಖಂಡ ಟಿಕಾಯತ್ ಅವರು ಯುಎಸ್ ನಾಯಕರಿಗೆ ಟ್ವೀಟ್ ಮಾಡಿದ್ದಾರೆ, “ನಮ್ಮನ್ನು ರಕ್ಷಿಸಲು ಈ ಕಪ್ಪು ಕಾನೂನುಗಳನ್ನು ರದ್ದುಗೊಳಿಸಬೇಕು” ಎಂದು ಮನವಿ ಮಾಡಿದ್ದಾರೆ.

ಸಂಯುಕ್ತ ಕಿಸಾನ್ ಮೋರ್ಚಾ ನೇತೃತ್ವದ ನೂರಾರು ರೈತರು ನವೆಂಬರ್ 2020 ರಿಂದ ಮೂರು ಕಾನೂನುಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ದೆಹಲಿಯ ಗಡಿಯಲ್ಲಿ ಬೀಡುಬಿಟ್ಟಿದ್ದಾರೆ. ಬದಲಾಗಿ, ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಗ್ಯಾರಂಟಿ ನೀಡುವ ಹೊಸ ಕಾನೂನನ್ನು ರೈತರು ಬಯಸುತ್ತಿದ್ದಾರೆ. ಆದರೆ ಇದ್ಯಾವುದಕ್ಕೂ ಬಗ್ಗದ ಕೇಂದ್ರ ಸರ್ಕಾರ ಪ್ರತಿಭಟನಾಕಾರರೊಂದಿಗೆ 11 ಸುತ್ತುಗಳ ಔಪಚಾರಿಕ ಸಂವಾದವನ್ನು ನಡೆಸಿದೆ.

ಸಭೆ ಬಳಿಕ ಕೇಂದ್ರ ಸಚಿವರು ಕಾನೂನುಗಳು ರೈತರ ಪರವಾಗಿದೆ ಎನ್ನುತ್ತಿದ್ದಾರೆ.

ಪ್ರಧಾನಿ ಮೋದಿ ಇಂದು ಸಂಜೆ ಶ್ವೇತಭವನದಲ್ಲಿ ಅಧ್ಯಕ್ಷ ಜೋ ಬಿಡೆನ್ ಜೊತೆ ದ್ವಿಪಕ್ಷೀಯ ಸಭೆ ನಡೆಸಲಿದ್ದಾರೆ. ಜನವರಿ 20 ರಂದು ಬಿಡೆನ್ ಅಮೆರಿಕ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಉಭಯ ನಾಯಕರ ನಡುವಿನ ಮೊದಲ ವ್ಯಕ್ತಿಗತ ಸಭೆ ಇದಾಗಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights