ದೆಹಲಿ ಕೋರ್ಟ್ ನಲ್ಲಿ ಶೂಟೌಟ್ : ಗ್ಯಾಂಗ್‌ಸ್ಟರ್ ಜಿತೇಂದರ್ ಗೋಗಿ ಸಾವು!

ದೆಹಲಿಯ ರೋಹಿಣಿ ನ್ಯಾಯಾಲಯದಲ್ಲಿ ಗುಂಡಿನ ಚಕಮಕಿ ನಡೆದು ಗ್ಯಾಂಗ್‌ಸ್ಟರ್ ಜಿತೇಂದರ್ ಗೋಗಿ ಮತ್ತು ಇತರ ಮೂವರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ರೂಂ ನಂಬರ್ 207 ರಲ್ಲಿ ಗುಂಡಿನ ದಾಳಿ ನಡೆದಿದ್ದು ಹಲವಾರು ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಗ್ಯಾಂಗ್‌ಸ್ಟರ್ ಜಿತೇಂದರ್ ಗೋಗಿ ಸಾವನ್ನಪ್ಪಿದ್ಧಾನೆ.

ಉತ್ತರ ದೆಹಲಿಯ ರೋಹಿಣಿ ನ್ಯಾಯಾಲಯಕ್ಕೆ ವಕೀಲರಂತೆ ವೇಷಧರಿಸಿ ಆಗಮಿಸಿದ ಗ್ಯಾಂಗ್ ಪೊಲೀಸರ ವಿರುದ್ಧ ಗುಂಡು ಹಾರಿಸಿದ್ದಾರೆ. ಈ ವೇಳೆ ಪರಸ್ಪರ ಗುಂಡಿನ ದಾಳಿ ನಡೆದಿದೆ. ಪ್ರತಿಸ್ಪರ್ಧಿ ಗ್ಯಾಂಗ್‌ನ ಇಬ್ಬರು ಸದಸ್ಯರು ಸಹ ಮೃತರಲ್ಲಿ ಇದ್ದಾರೆ ಎನ್ನಲಾಗುತ್ತಿದೆ.

ಹಲವಾರು ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿ ಕುಖ್ಯಾತ ರೌಡಿ ಜಿತೇಂದರ್ ಗೋಗಿ ತಿಹಾರ್ ನಲ್ಲಿ ಜೈಲುವಾಸದಲ್ಲಿದ್ದಾಗ ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ಎದುರಾಳಿ ತಂಡದ ಸದಸ್ಯರು ವಕೀಲರಂತೆ ಬಟ್ಟೆ ಧರಿಸಿ ನ್ಯಾಯಾಲಯಕ್ಕೆ ಪ್ರವೇಶಿಸಿ ಗುಂಡು ಹಾರಿಸಿದ್ದಾರೆ.

ಈ ಘಟನೆಯು ನ್ಯಾಯಾಲಯದ ಆವರಣದಲ್ಲಿ ಭಾರೀ ಭದ್ರತಾ ಲೋಪವನ್ನು ಸೂಚಿಸುತ್ತದೆ.

ಘಟನೆಯ ಬಗ್ಗೆ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights