ಸಂಕಷ್ಟದಲ್ಲಿರುವ ಚಿತ್ರಮಂದಿರಗಳಿಗೆ ಗುಡ್ ನ್ಯೂಸ್ : ಹೌಸ್ ಫುಲ್ ಪ್ರದರ್ಶನಕ್ಕೆ ಗ್ರೀನ್ ಸಿಗ್ನಲ್!

ಕೊರೊನಾದಿಂದಾಗಿ ಸಂಕಷ್ಟದಲ್ಲಿರುವ ಚಿತ್ರಮಂದಿರಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಅಕ್ಟೋಬರ್ 1 ರಿಂದ ಕೋವಿಡ್ ಪಾಸಿಟಿವ್ ರೇಟ್ ಶೇ. 1ಕ್ಕಿಂತ ಕಡಿಮೆ ಇರುವ ಪ್ರದೇಶಗಳಲ್ಲಿ 100% ಥಿಯೇಟರ್ ಭರ್ತಿಗೆ ಅವಕಾಶ ನೀಡಲು ತೀರ್ಮಾನಿಸಲಾಗಿದೆ.

ಹೌದು.. ಇಂದು ಕೋವಿಡ್ ಎಕ್ಸಪರ್ಟ್ ನೊಂದಿಗೆ ಉನ್ನತಮಟ್ಟದ ಸಭೆ ಬಳಿಕ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ” ಅಕ್ಟೋಬರ್ 1 ರಿಂದ ಕೋವಿಡ್ ಪಾಸಿಟಿವ್ ರೇಟ್ ಶೇ 1ಕ್ಕಿಂತ ಕಡಿಮೆ ಇರುವ ಪ್ರದೇಶಗಳಲ್ಲಿ 100% ಥಿಯೇಟರ್ ಭರ್ತಿಗೆ ಅವಕಾಶ ನೀಡಲು ತೀರ್ಮಾನಿಸಲಾಗಿದೆ. ಶೇ. 1ಕ್ಕಿಂತ ಹೆಚ್ಚಿದ್ದರೆ 50% ರಷ್ಟು ಭರ್ತಿಗೆ ಅವಕಾಶ ನೀಡಲಾಗಿದೆ. ಕೋವಿಡ್ ಪಾಸಿಟಿವ್ ರೇಟ್ ಶೇ 2ಕ್ಕಿಂತ ಹೆಚ್ಚಿರುವ ಪ್ರದೇಶಗಳಲ್ಲಿ ಥಿಯೇಟರ್ ಬಂದ್ ಮಾಡಲಾಗುವುದು. ಥಿಯೇಟರ್ ಪ್ರವೇಶಕ್ಕೆ ಒಂದು ಲಸಿಕೆ ಕಡ್ಡಾಯಗೊಳಿಸಲಾಗಿದೆ. ರಾತ್ರಿ 10 ರಿಂದ ಮುಂಜಾನೆ 5ರವೆರಗೆ ಕರ್ಫ್ಯೂ ಜಾರಿಯಿರುತ್ತದೆ” ಎಂದು ಹೇಳಿದ್ದಾರೆ.

ಅಕ್ಟೋಬರ್ 3 ರಿಂದ ಪಬ್ ಗಳಲ್ಲೂ ನಿರ್ಬಂಧ ತೆರಯಲು ನಿರ್ಧರಿಸಲಾಗಿದೆ. ಥಿಯೇಟರ್ ಗೆ ಇರುವ ಮಾನದಂಡವೇ ಪಬ್ ಗೂ ಅನುಸರಿಸಲಾಗುವುದು ಎಂದು ಬೊಮ್ಮಾಯಿ ಹೇಳಿದ್ದಾರೆ. ಜೊತೆಗೆ ದಸರಾಗೆ ಪ್ರತ್ಯೇಕ ಮಾರ್ಗಸೂಚಿ ಬಿಡುಗಡೆ ಮಾಡಲಾಗುತ್ತದೆ ಎಂದು ಬೊಮ್ಮಾಯಿ ಹೇಳಿದ್ದಾರೆ.

ಅಕ್ಟೋಬರ್ 3 ರಿಂದ 6-12 ತರಗತಿವರೆಗೂ ಶೇ100 ಹಾಜರಾತಿಗೆ ಸರ್ಕಾರ ಅವಕಾಶ ನೀಡಿದೆ. ವಾರದಲ್ಲಿ 5 ದಿನ ಶಾಲಾ-ಕಾಲೇಜು ನಡೆಸಲು ತೀರ್ಮಾನಿಸಲಾಗಿದೆ ಎಂದು ಸಿಎಂ ಹೇಳಿದ್ದಾರೆ.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights