ಗೌಡರ ಕುಟುಂಬದಲ್ಲಿ ಸಂತಸ : ತಂದೆಯಾದ ಖುಷಿಯಲ್ಲಿ ನಟ ನಿಖಿಲ್ ಕುಮಾರಸ್ವಾಮಿ!

ಗೌಡರ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದ್ದು ಇಂದು ನಟ ನಿಖಿಲ್ ಕುಮಾರಸ್ವಾಮಿ ಹಾಗೂ ರೇವತಿ ದಂಪತಿಗೆ ಗಂಡು ಮಗು ಜನನವಾಗಿದೆ.

ಕೆಲದಿನಗಳ ಹಿಂದೆಯಷ್ಟೇ ನಟ ನಿಖಿಲ್ ಕುಮಾರಸ್ವಾಮಿ ತಮ್ಮ ಪತ್ಮಿ ರೇವತಿ ಸೀಮಂತ ಕಾರ್ಯವನ್ನು ಅದ್ದುರಿಯಾಗಿ ಮಾಡಿದ್ದರು. ಇಂದು ಗೌಡರ ಮನೆಯಲ್ಲಿ ಹೊಸ ಅತಿಥಿ ಎಂಟ್ರಿ ಕೊಟ್ಟಿದ್ದಾನೆ. ಜ್ಯೂನಿಯರ್ ನಿಖಿಲ್ ಆಗಮನದಲ್ಲಿ ಗೌಡರ ಕುಟುಂಬ ಸದ್ಸಯರು ಸಂತಸದಲ್ಲಿದ್ದಾರೆ.

ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ರೇವತಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದು ಹೆಚ್ ಡಿ ಕುಮಾರಸ್ವಾಮಿ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಲಿದ್ದಾರೆ.

ತಾತನಾದ ಸಂಭ್ರಮದಲ್ಲಿರುವ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು, ‘ನನ್ನ ಜೀವನದಲ್ಲಿ ಇನ್ನೊಂದು ಶುಭ ಘಳಿಗೆ ಬಂದಿದೆ. ನಮ್ಮ ಪರಿವಾರಕ್ಕೆ ಹೊಸ ಸದಸ್ಯನ ಆಗಮನವಾಗಿದೆ. ತಾತನಾದೆ ಎಂದು ಹೇಳಲು ಅತೀವ ಸಂತಸವಾಗುತ್ತಿದೆ. ಕಂದನಿಗೆ ನಿಮ್ಮೆಲ್ಲರ ಹಾರೈಕೆ ಮತ್ತು ಆಶೀರ್ವಾದ ಇರಲಿ ಎಂದು ಪ್ರಾರ್ಥನೆ ಮಾಡುತ್ತೇನೆ’ ಎಂದು ಹೇಳಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights