ದೇಶದಲ್ಲಿ ಕೊರೊನಾ ಏರಿಳಿಕೆ : 29,616 ಹೊಸ ಕೇಸ್ – 290 ಜನ ಬಲಿ!
ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಳಿಕೆಯಾಗುತ್ತಿದ್ದು ಕಳೆದ 24 ಗಂಟೆಯಲ್ಲಿ 29,616 ಹೊಸ ಪ್ರಕರಣಗಳು ದಾಖಲಾಗಿವೆ.
ಹೊಸದಾಗಿ ದಾಖಲಾದ 29,616 ಸೋಂಕಿತರ ಸಂಖ್ಯೆ ಸೇರಿದಂತೆ ದೇಶದ ಒಟ್ಟು ಸೋಂಕಿತರ ಸಂಖ್ಯೆ 3,36,24,419 ಕ್ಕೆ ತಲುಪಿದೆ. ಇನ್ನೂ ದೇಶದಲ್ಲಿ 3,01,442 ಸಕ್ರಿಯ ಪ್ರಕರಣಗಳಿದ್ದು ಸಾವಿನ ಸಂಖ್ಯೆ 4,46,658 ಕ್ಕೆ ಏರಿಕೆಯಾಗಿದೆ.
ಶನಿವಾರ ಅತಿಹೆಚ್ಚು ಪ್ರಕರಣಗಳನ್ನು ದಾಖಲಿಸಿರುವ ಐದು ರಾಜ್ಯಗಳಲ್ಲಿ ಕೇರಳ ಅತೀ ಹೆಚ್ಚು ಸೋಂಕಿತರ ಸಂಖ್ಯೆಯನ್ನು ದಾಖಲಿಸಿದೆ. ಕೇರಳದಲ್ಲಿ ಹೊಸದಾಗಿ 17,983 ಪ್ರಕರಣಗಳು ದಾಖಲಾಗಿದ್ದರೆ, ಮಹಾರಾಷ್ಟ್ರದಲ್ಲಿ 3,286 ಪ್ರಕರಣಗಳು, ತಮಿಳುನಾಡಿನಲ್ಲಿ 1,733 ಪ್ರಕರಣಗಳು, ಮಿಜೋರಾಂ 1,322 ಪ್ರಕರಣಗಳು ಮತ್ತು ಆಂಧ್ರಪ್ರದೇಶ 1,246 ಪ್ರಕರಣಗಳನ್ನು ದಾಖಲಿಸಿದೆ.
ಶನಿವಾರದಂದು ಕೇರಳದಲ್ಲಿ ಗರಿಷ್ಠ (127) ಕೋವಿಡ್ -19 ಸಾವುನೋವುಗಳು ವರದಿಯಾಗಿವೆ. ಮಹಾರಾಷ್ಟ್ರದಲ್ಲಿ 51 ಸಾವುಗಳು ದಾಖಲಾಗಿವೆ.
ಭಾರತದಲ್ಲಿ ಇದುವರೆಗೆ 84,89,29,160 ಡೋಸ್ ಕೋವಿಡ್ -19 ಲಸಿಕೆಗಳನ್ನು ನೀಡಲಾಗಿದೆ. ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 71,04,051 ಡೋಸ್ ಲಸಿಕೆಯನ್ನು ನೀಡಲಾಗಿದೆ.
ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ ಒಟ್ಟು 15,92,421 ಮಾದರಿಗಳನ್ನು ಪರೀಕ್ಷಿಸಲಾಗಿದೆ. ದೇಶದಲ್ಲಿ ಇದುವರೆಗೆ 56 ಕೋಟಿಗೂ ಹೆಚ್ಚು ಪರೀಕ್ಷೆಗಳನ್ನು ನಡೆಸಲಾಗಿದೆ.