ಮುಂಬೈನ ಬೈಕುಲ್ಲಾ ಜೈಲಿನಲ್ಲಿ 6 ಮಕ್ಕಳು ಸೇರಿದಂತೆ 39 ಕೈದಿಗಳಿಗೆ ಕೊರೊನಾ!

ಕೊರೊನಾ ಸೋಂಕಿತರ ಪ್ರಕರಣಗಳ ಸಂಖ್ಯೆ ಏರಿಳಿಕೆಯಾಗುತ್ತಿದ್ದು ಮುಂಬೈನ ಬೈಕುಲ್ಲಾ ಜೈಲಿನಲ್ಲಿ 6 ಮಕ್ಕಳು ಸೇರಿದಂತೆ 39 ಕೈದಿಗಳಿಗೆ ಕೋವಿಡ್ ಸೋಂಕು ತಗುಲಿದೆ.

ಮುಂಬೈನ ಬೈಕುಲ್ಲಾ ಜೈಲಿನಲ್ಲಿ ಆರು ಮಕ್ಕಳನ್ನು ಒಳಗೊಂಡಂತೆ 39 ಕೈದಿಗಳನ್ನು ಕೋವಿಡ್ -19 ಗೆ ಪಾಸಿಟಿವ್ ಪರೀಕ್ಷೆಯ ನಂತರ ಪ್ರತ್ಯೇಕ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ.

ಗರ್ಭಿಣಿ ಮಹಿಳೆಗೂ ಕೂಡ ಕೊರೊನಾ ಸೋಂಕು ತಗುಲಿದೆ. ಆಕೆಯನ್ನು ಮುಂಜಾಗ್ರತಾ ಕ್ರಮವಾಗಿ ಆಸ್ಪತ್ರೆಗೆ ವರ್ಗಾಯಿಸಲಾಗಿದೆ. ಇದರ ಬೆನ್ನಲ್ಲೆ ಬೈಕುಲ್ಲಾ ಜೈಲಿನಲ್ಲಿ ಸುಮಾರು 120 ಕೈದಿಗಳು ಮತ್ತು ಜೈಲು ಸಿಬ್ಬಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದೆ.

ಇಷ್ಟು ಕೈದಿಗಳಿಗೆ ಕೊರೊನಾ ಸೋಂಕು ಕಾಣಿಸಿಕೊಮಡಿದ್ದರೂ ಜೈಲನ್ನು ಕಂಟೈನ್ಮೆಂಟ್ ಜೋನ್ ಎಂದು ಘೋಷಿಸಲಾಗಿಲ್ಲ ಹಾಗೂ ನಾಗರಿಕ ಸಂಸ್ಥೆಯ ದೈನಂದಿನ ಬುಲೆಟಿನ್ ತಪ್ಪಾಗಿದೆ ಎಂದು ಬಿಎಂಸಿಯ ಇ ವಾರ್ಡ್‌ನ ವೈದ್ಯಕೀಯ ಆರೋಗ್ಯ ಅಧಿಕಾರಿ ಆರೋಪಿಸಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights