ರೈತರ ಭಾರತ್ ಬಂದ್ ಕರೆಗೆ ಆಂಧ್ರಪ್ರದೇಶ ಸರ್ಕಾರದ ಬೆಂಬಲ..!

ಭಾರತ್ ಬಂದ್ ಗೆ ಕರೆ ನೀಡಿರುವ ರೈತರಿಗೆ ಆಂಧ್ರಪ್ರದೇಶ ಸರ್ಕಾರ ಬೆಂಬಲ ನೀಡಿದೆ.

ಆಂಧ್ರಪ್ರದೇಶ ಸರ್ಕಾರವು ಸೆಪ್ಟೆಂಬರ್ 27 ರಂದು ಸಂಯುಕ್ತ ಕಿಸಾನ್ ಮೋರ್ಚಾ ನೇತೃತ್ವದ ಭಾರತ್ ಬಂದ್‌ಗೆ ಸಂಪೂರ್ಣ ಬೆಂಬಲವನ್ನು ಘೋಷಿಸಿದೆ. ಮಾತ್ರವಲ್ಲದೇ ವಿಶಾಖಪಟ್ಟಣಂ ಉಕ್ಕಿನ ಕಾರ್ಖಾನೆಯ ಕಾರ್ಮಿಕರೂ ಸಹ ರೈತರ ಕರೆಗೆ ಬೆಂಬಲ ನೀಡಲಿದ್ದಾರೆ ಎಂದು ಸಾರಿಗೆ ಸಚಿವ ಪೆರ್ನಿ ವೆಂಕಟರಾಮಯ್ಯ (ನಾನಿ) ತಿಳಿಸಿದ್ದಾರೆ.

ವೈಎಸ್ಆರ್ ಕಾಂಗ್ರೆಸ್ ಸೇರಿದಂತೆ ಆಂಧ್ರಪ್ರದೇಶ ಸರ್ಕಾರವು ರೈತರ ಮತ್ತು ಉಕ್ಕಿನ ಕಾರ್ಖಾನೆಯ ಕಾರ್ಮಿಕರ ಕಾಳಜಿಯನ್ನು ಬೆಂಬಲಿಸುತ್ತಿದೆ.

ಸೆಪ್ಟೆಂಬರ್ 26 ಮಧ್ಯರಾತ್ರಿಯಿಂದ ಸೆಪ್ಟೆಂಬರ್ 27 ಮಧ್ಯಾಹ್ನದವರೆಗೆ ರಾಜ್ಯಾದ್ಯಂತ ಎಪಿಎಸ್‌ಆರ್‌ಟಿಸಿ ಬಸ್‌ಗಳನ್ನು ನಿಲ್ಲಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರು ವಿಶಾಖಪಟ್ಟಣಂ ಉಕ್ಕಿನ ಕಾರ್ಖಾನೆಯ ಖಾಸಗೀಕರಣವನ್ನು ಸಂಪೂರ್ಣವಾಗಿ ವಿರೋಧಿಸುತ್ತಿದ್ದಾರೆ. ಬಂದ್‌ನಲ್ಲಿ ಶಾಂತಿಯುತ ಪ್ರತಿಭಟನೆಗೆ ಸಚಿವರು ಮನವಿ ಮಾಡಿದರು.

ಎಡಪಕ್ಷಗಳಾದ ಕಾಂಗ್ರೆಸ್ ಮತ್ತು ತೆಲುಗು ದೇಶಂ ಪಕ್ಷಗಳು ಈಗಾಗಲೇ ಭಾರತ್ ಬಂದ್ ಗೆ ತಮ್ಮ ಬೆಂಬಲವನ್ನು ಸೂಚಿಸಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights