ಬರ್ತಡೇ ಪಾರ್ಟಿಗೆ ಕರೆದು ಮಹಿಳಾ ಪೇದೆ ಮೇಲೆ ಸಾಮೂಹಿಕ ಅತ್ಯಾಚಾರ: ಇಬ್ಬರ ಬಂಧನ

ಮಧ್ಯಪ್ರದೇಶದ ನೀಮುಚ್ ಜಿಲ್ಲೆಯಲ್ಲಿ ಮೂವರು ಕಾಮುಕರು ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಈ ಕೃತ್ಯವನ್ನು ಚಿತ್ರೀಕರಿಸಿದ್ದು, ಕೊಲ್ಲುವ ಬೆದರಿಕೆ ಹಾಕಿದ್ದಾರೆ ಎಂದು ಸಂತ್ರಸ್ತ ಮಹಿಳಾ ಪೊಲೀಸ್ ಕಾನ್ಸ್ಟೇಬಲ್ ಆರೋಪಿಸಿದ್ದಾರೆ.

ಈ ತಿಂಗಳ ಆರಂಭದಲ್ಲಿ ಈ ಘಟನೆ ನಡೆದಿತ್ತು. ಆದರೆ, ಸೆಪ್ಟೆಂಬರ್ 13 ರಂದು ಸಂತ್ರಸ್ತೆ ದೂರು ದಾಖಲಿಸಿದ್ದು, ನಂತರ ತನಿಖೆ ನಡೆಸಿ ಐದು ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಎಫ್‌ಐಆರ್‌ನಲ್ಲಿ ಮುಖ್ಯ ಆರೋಪಿಯ ತಾಯಿಯ ಹೆಸರನ್ನೂ ಸೇರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಮುಖ ಆರೋಪಿ ತನ್ನನ್ನು ಆತನ ತಮ್ಮನ ಹುಟ್ಟು ಹಬ್ಬದ ಪಾರ್ಟಿಗೆ ಕರೆದಿದ್ದ, ಅಲ್ಲಿಗೆ ಹೋದಾಗ ಆತ, ಆತನ ಸಹೋದರ ಮತ್ತು ಇನ್ನೊಬ್ಬ ಪುರುಷ ಸೇರಿ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತೆ ದೂರು ನೀಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಪ್ರಮುಖ ಆರೋಪಿಯ ತಾಯಿ ಆಕೆಯನ್ನು ಮತ್ತಷ್ಟು ಬ್ಲ್ಯಾಕ್ ಮೇಲ್ ಮಾಡಿದ್ದು, ಆರೋಪಿಯ ಸಂಬಂಧಿಕರೊಬ್ಬರು ಕೂಡ ಕೊಲೆ ಬೆದರಿಕೆ ಹಾಕಿ ಹಣ ವಸೂಲಿಗೆ ಯತ್ನಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳು ಫೇಸ್‌ಬುಕ್‌ನಲ್ಲಿ ಸಂತ್ರಸ್ತೆಯೊಂದಿಗೆ ಸ್ನೇಹ ಬೆಳೆಸಿದ್ದರು. ಏಪ್ರಿಲ್‌ನಿಂದ ಆಕೆಯೊಂದಿಗೆ ವಾಟ್ಸಾಪ್‌ನಲ್ಲಿ ಚಾಟ್‌ ಮಾಡುತ್ತಿದ್ದರು. ಆತ ತನ್ನ ಕಿರಿಯ ಸಹೋದರನ ಹುಟ್ಟುಹಬ್ಬಕ್ಕೆ ಸಂತ್ರಸ್ತೆಯನ್ನು ಆಹ್ವಾನಿಸಿದ್ದ, ಈ ವೇಳೆ ಆಕೆಯ ಮೇಲೆ ಮೂವರು ಅತ್ಯಾಚಾರ ಎಸಗಿದ್ದಾರೆ ಎಂದು ಮಹಿಳಾ ಪೊಲೀಸ್ ಠಾಣೆಯ ಎಸ್‌ಐ ಅನುರಾಧಾ ಗಿರ್ವಾಲ್ ಹೇಳಿದ್ದಾರೆ.

ಇದನ್ನೂ ಓದಿ: ಭಾರತೀಯ ಮಾಧ್ಯಮಗಳ ಬಗ್ಗೆ ಮೋದಿ ಎದುರೇ ವ್ಯಂಗ್ಯವಾಡಿದ ಬೈಡನ್?

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights