‘ಸಂಪುಟದಲ್ಲಿ ಕ್ರಿಶ್ಚಿಯನ್, ಮುಸ್ಲಿಂ ಸಚಿವರಿಗೆ ಅವಕಾಶ ನೀಡದೆ ಸಬ್ ಕಾ ವಿಕಾಸ ಹೇಗೆ ಸಾಧ್ಯ?’ ಸಿದ್ದರಾಮಯ್ಯ ಕಿಡಿ!

‘ಸಂಪುಟದಲ್ಲಿ ಕ್ರಿಶ್ಚಿಯನ್, ಮುಸ್ಲಿಂ ಸಚಿವನಿಗೆ ಅವಕಾಶ ನೀಡದೆ ಸಬ್ ಕಾ ವಿಕಾಸ ಹೇಗೆ ಸಾಧ್ಯ?’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಪ್ರಶ್ನಿಸಿದ್ದಾರೆ.

ದೇಶದ ಪ್ರಧಾನಿ ನರೇಂದ್ರ ಮೋದಿ ಪ್ರತೀ ಬಾರಿ ಭಾಷಣದಲ್ಲಿ ‘ಸಬ್ ಕಾ ಸಾಥ್ ಸಬ್ ಕಾ ವಿಕಾಸ್’ ಎನ್ನುತ್ತಾರೆ. ಆದರೆ ಅವರ ಸಂಪುಟದಲ್ಲಿ ಯಾರೋಬ್ಬ ಕ್ರಿಶ್ಚಿಯನ್, ಮುಸ್ಲಿಂ ಸಚಿವನಿಗೆ ಅವಕಾಶ ನೀಡಿಲ್ಲ. ಹೀಗಾದರೆ ಸಬ್ ಕಾ ವಿಕಾಸ್ ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ.

ಈ ಬಗ್ಗೆ  ಸರಣಿ ಟ್ವೀಟ್ ಮಾಡಿರುವ ಅವರು, ಬಿಜೆಪಿ ಸುಳ್ಳಿನ ಕಾರ್ಖಾನೆ ಇದ್ದಂತೆ. ಸುಳ್ಳಿನ ಕಂತೆಗಳನ್ನು ಸೃಷ್ಟಿ ಮಾಡಿ ಮುಗ್ಧ ಜನರ ತಲೆಗೆ ತುಂಬುತ್ತಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಎನ್ನುತ್ತಾರೆ, ಆದರೆ ಮಂತ್ರಿಮಂಡಲದಲ್ಲಿ ಒಬ್ಬನೇ ಒಬ್ಬ ಕ್ರಿಶ್ಚಿಯನ್, ಮುಸ್ಲಿಂ ಸಚಿವನಿಗೆ ಅವಕಾಶ ನೀಡಿಲ್ಲ’ ಎಂದು ದೂರಿದ್ದಾರೆ.

‘ಅನ್ನಭಾಗ್ಯ ಯೋಜನೆ ಜಾರಿಗೊಳಿಸಿ, ಬಡವರಿಗೆ ಉಚಿತವಾಗಿ ತಲಾ 7 ಕೆ.ಜಿ ಅಕ್ಕಿ ನೀಡಿದ್ದು ನಮ್ಮ ಸರ್ಕಾರ. ಈ ಯೋಜನೆಯನ್ನು ಮುಂದುವರಿಸಿಕೊಂಡು ಹೋಗಲು ಬಿಜೆಪಿ ಸರ್ಕಾರಕ್ಕೆ ಮನಸಿಲ್ಲ. ತಿನ್ನುವ ಅನ್ನದಲ್ಲೂ ರಾಜಕೀಯ ಮಾಡುತ್ತಾರೆ. ಮುಂದೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಮೇಲೆ ಬಡವರಿಗೆ ಉಚಿತವಾಗಿ 10 ಕೆ.ಜಿ ಅಕ್ಕಿ ನೀಡುತ್ತೇವೆ.

‘ಬಿಜೆಪಿಯವರು ಹಿಂಬಾಗಿಲ ಮೂಲಕ ಮಾತ್ರ ಅಧಿಕಾರಕ್ಕೆ ಬರಬಲ್ಲರು. ಅವರಿಗೆ ಸ್ವಂತ ಶಕ್ತಿ ಇಲ್ಲ. ಹಣ, ಅಧಿಕಾರದ ಆಮಿಷವೊಡ್ಡಿ ಶಾಸಕರನ್ನು ಖರೀದಿಸಿ ಸರ್ಕಾರ ಮಾಡಿದರೂ ಬಿ.ಎಸ್.ಯಡಿಯೂರಪ್ಪ ಅವರನ್ನೇ ಕಿತ್ತು ಬಿಸಾಕಿದರು. ಇದಕ್ಕೇ ಹೇಳುವುದು ‘ಮಾಡಿದ್ದುಣ್ಣೋ ಮಹರಾಯ’ ಎಂದು’ ಕಿಡಿಕಾರಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights