ಸಿಎಂ ಮಮತಾ ಬ್ಯಾನರ್ಜಿ ಸ್ಪರ್ಧಿಸಿರುವ ಭವಾನಿಪುರ ಉಪಚುನಾವಣೆಯನ್ನು ರದ್ದು ಮಾಡಲು ಸಾಧ್ಯವಿಲ್ಲ: ಕೊಲ್ಕತ್ತಾ ಹೈಕೋರ್ಟ್‌

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸ್ಪರ್ಧಿಸಿದರುವ ಭವಾನಿಪುರ ಕ್ಷೇತ್ರದ ಉಪಚುನಾವಣೆಯನ್ನು ರದ್ದುಗೊಳಿಸಲು ಸಾಧ್ಯವಿಲ್ಲ ಎಂದು ಕೊಲ್ಕತ್ತಾ ಹೈಕೋರ್ಟ್‌ ಹೇಳಿದೆ.

ಪಶ್ಚಿಮ ಬಂಗಾಳದ ಮೂರು ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. ಈ ಪೈಕಿ ಭವಾನಿಪುರ ವಿಧಾನಸಭಾ ಕ್ಷೇತ್ರದಿಂದ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸ್ಪರ್ಧಿಸುತ್ತಿದ್ದಾರೆ. ನಂದಿಗ್ರಾಮ ಕ್ಷೇತ್ರದಲ್ಲಿ ಸೋತಿದ್ದ ಮಮತಾ ಅವರು ಸಿಎಂ ಆಗಿ ಮುಂದುವರಿಯಲು ಈ ಉಪಚುನಾವಣೆಯಲ್ಲಿ ಗೆಲ್ಲುವುದು ಅನಿವಾರ್ಯವಾಗಿದೆ.

ಇಲ್ಲಿನ ಉಪಚುನಾವಣೆಯನ್ನು ರದ್ದುಗೊಳಿಸಬೇಕು ಎಂದು ಕೊಲ್ಕತ್ತಾ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿತ್ತು.

ಅರ್ಜಿಯ ವಿಚಾರಣೆ ನಡೆಸಿರುವ ಹೈಕೋರ್ಟ್‌, ಭವಾನಿಪುರ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆಯು “ಸಾಂವಿಧಾನಿಕ ತುರ್ತುಸ್ಥಿತಿ”ಯಾಗಿದೆ ಎಂದು ಚುನಾವಣಾ ಆಯೋಗ ಹೇಳಿಕೆಯನ್ನು ಪರಿಶೀಲಿಸಿದ್ದು, ಅರ್ಜಿಯನ್ನು ವಜಾಗೊಳಿಸಿದೆ.

ನಂದಿಗ್ರಾಮದಲ್ಲಿ ಸುವೇಂದು ಅಧಿಕಾರಿ ವಿರುದ್ದ ಮಮತಾ ಬ್ಯಾನರ್ಜಿ ಅವರು ಸೋತ ಬಳಿಕ ಭವಾನಿಪುರ ಕ್ಷೇತ್ರದಿಂದ ಆಯ್ಕೆಯಾಗಿದ್ದ ಟಿಎಂಸಿ ಶಾಸಕ ಸೋವಂದೇಬ್ ಚಟ್ಟೋಪಾಧ್ಯಾಯ ರಾಜೀನಾಮೆ ನೀಡಿದ್ದರು. ಆ ಕ್ಷೇತ್ರದಿಂದ ಮಮತಾ ಸ್ಪರ್ಧಿಸಿದ್ದಾರೆ. ಅಲ್ಲದೆ, 2011 ಮತ್ತು 2016ರಲ್ಲಿ ಮಮತಾ ಬ್ಯಾನರ್ಜಿ ಅವರು ಭವಾನಿಪುರ ಕ್ಷೇತ್ರವನ್ನು ಪ್ರತಿನಿಧಿಸಿದ್ದರು.

ಇದನ್ನೂ ಓದಿ: ರಾಜ್ಯಸಭೆಗೆ ಪುದುಚೇರಿಯಿಂದ ಮೊದಲ ಬಿಜೆಪಿ ಸಂಸದರ ಆಯ್ಕೆ; ಹೆಮ್ಮೆಯ ವಿಷಯ ಎಂದ ಮೋದಿ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights