ಗರ್ಭಿಣಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ; ಇಬ್ಬರ ಬಂಧನ

ತುಂಬು ಗರ್ಭಿಣಿ ಮಹಿಳೆ ಮೇಲೆ ಮೂವರು ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿರುವ ಹೀನ ಕೃತ್ಯ ಬಿಹಾರದ ಪಾಟ್ನಾದಲ್ಲಿ ನಡೆದಿದೆ. ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಆರು ತಿಂಗಳ ಗರ್ಭಿಣಿಯಾಗಿದ್ದ 21 ವರ್ಷದ ಮಹಿಳೆ ಊಟದ ನಂತರ ವಾಕ್‌ ಮಾಡಲು ಶನಿವಾರ ರಾತ್ರಿ ರಸ್ತೆಯಲ್ಲಿ ತೆರಳುತ್ತಿದ್ದರು. ಈ ವೇಳೆ ಆಕೆಯನ್ನು ಅಪಹರಿಸಿದ ಮೂವರು ಕಾಮುಕರು ಆಕೆಯನ್ನು ನಿರ್ಜನ ಪ್ರದೇಶಕ್ಕೆ ಎಳೆದೊಯ್ದು ಅತ್ಯಾಚಾರ ಎಸಗಿದ್ದಾರೆ.

ವಾಕ್‌ ಮಾಡಲು ಹೋದ ಮಹಿಳೆ ಹಿಂದಿರುಗಿ ಬಾರದಿದ್ದಾಗ, ಆಕೆಯ ಕುಟುಂಬಸ್ಥರು ಆಕೆಗಾಗಿ ಹುಡುಕಾಟ ನಡೆಸಿದ್ದಾರೆ. ಭಾನುವಾರ ಮುಂಜಾನೆ ಪಾಟ್ನಾದ ರೈಲ್ವೇ ನಿಲ್ದಾಣದ ಬಳಿ ಮಹಿಳೆ ಅಳುತ್ತಿದ್ದದ್ದನ್ನು ಗಮನಿಸಿದ ಸಾರ್ವಜನಿಕರು ರೈಲ್ವೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸಂತ್ರಸ್ತೆಯನ್ನು ಮಹಿಳಾ ಪೊಲೀಸ್ ಠಾಣೆಗೆ ಕರೆದೊಯ್ದು ವಿಚಾರಿಸಿದ್ದಾರೆ. ನಂತರ, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮೂವರು ಆರೋಪಿಗಳಲ್ಲಿ ಇಬ್ಬರನ್ನು ಬಂಧಿಸಿದ್ದಾರೆ.

ಬಂಧಸಲಾದ ಆರೋಪಿಗಳನ್ನು 19 ವರ್ಷದ ಅಂಕಿತ್ ಕುಮಾರ್ ಮತ್ತು 21 ವರ್ಷದ ವಿಶಾಲ್ ಕುಮಾರ್ ಎಂದು ಗುರುತಿಸಲಾಗಿದೆ. ಮೂರನೇ ಆರೋಪಿ ಶ್ಯಾಮ್ ಕುಮಾರ್‌ಗಾಗಿ ಹುಡುಕಾಟ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನ್ಯಾಯಾಧೀಶರ ಸಮ್ಮುಖದಲ್ಲಿ ಮಹಿಳೆಯ ಹೇಳಿಕೆಯನ್ನು ದಾಖಲಿಸಲಾಗುತ್ತದೆ. ಆಕೆ ಮತ್ತು ಆರೋಪಿಗಳು ಅದೇ ಪ್ರದೇಶದ ನಿವಾಸಿಗಳಾಗಿದ್ದು, ಮತ್ತೊಬ್ಬ ಆರೋಪಿ ಬಂಧನಕ್ಕೆ ಕ್ರಮಕೈಗೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ಸಿಂದಗಿ ಮತ್ತು  ಹಾನಗಲ್ ಕ್ಷೇತ್ರಗಳಿಗೆ ಉಪಚುನಾವಣೆ ದಿನಾಂಕ ಫಿಕ್ಸ್..!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights