ಬೆಂಗಳೂರಿನ ಮಂತ್ರಿಮಾಲ್‌ಗೆ ಬೀಗ ಜಡಿದ ಬಿಬಿಎಂಪಿ!

ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಬಹುದೊಡ್ಡ ಮಾಲ್‌ ಎಂದು ಕರೆಸಿಕೊಂಡಿರುವ ಮಂತ್ರಿಮಾಲ್‌ ಮಾಲೀಕರು ಆಸ್ತಿ ತೆರಿಗೆ ಪಾವತಿಸದ ಹಿನ್ನೆಲೆಯಲ್ಲಿ ಮಾಲ್‌ಗೆ ಬಿಬಿಎಂಪಿ ಅಧಿಕಾರಿಗಳು ಬೀಗ ಜಡಿಸಿದ್ದಾರೆ.

ಮಂತ್ರಿಮಾಲ್‌ನ 27,22,6,302 ರೂ. ಆಸ್ತಿ ತೆರಿಗೆ ಬಾಕಿ ಇದ್ದು, ಇದೂವರೆಗೂ ತೆರಿಕೆಯನ್ನು ಮಾಲೀಕರು ಪಾವತಿಸಿಲ್ಲ. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ಹಲವು ಬಾರಿ ನೋಟಿಸ್‌ ನೀಡಿದ್ದರು. ಮಾಲೀಕರು ಪ್ರತಿಕ್ರಿಯಿಸಿಲ್ಲ. ಹೀಗಾಗಿ ಮಂತ್ರಿಮಾಲ್ ವಿರುದ್ದ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು, ಬಿಬಿಎಂಪಿ ಅಧಿಕಾರಿಗಳು ಮಾಲ್‌ನ ಮುಖ್ಯ ದ್ವಾರಕ್ಕೆ ಬೀಗ ಜಡಿದಿದ್ದಾರೆ.

ಬಿಬಿಎಂಪಿ ಜಂಟಿ ಆಯುಕ್ತ ಶಿವಸ್ವಾಮಿ ನೇತೃತ್ವದ ತಂಡ ಮಂತ್ರಿ ಮಾಲ್‌ಗೆ ತೆರಳಿದ್ದು, ಮಾಲ್‌ನಲ್ಲಿದ್ದ ಜನರನ್ನು ಹೊರಗಿ ಕಳುಹಿಸಿ, ಮುಖ್ಯ ದ್ವಾರಕ್ಕೆ ಬೀಗ ಜಡಿಸಿದ್ದಾರೆ. ಗ್ರಾಹಕರು ಮಾಲ್‌ನಿಂದ ವಾಪಸ್ ತೆರಳಿದ್ದಾರೆ.

ಸದ್ಯ ಮಾಲ್‌ಗೆ ಬೀಗ ಹಾಕಲಾಗಿದ್ದು, ಮುಖ್ಯ ಆಯುಕ್ತರ ನಿರ್ದೇಶನದಂತೆ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಹಿಂದೆ ಮಾಲೀಕರು ಆಸ್ತಿ ತೆರಿಗೆ ಪಾವತಿಗೆ ನೀಡಿದ್ದ ಚೆಕ್‌ ಬೌನ್ಸ್ ಆಗಿತ್ತು. ಈ ಹಿನ್ನೆಲೆಯಲ್ಲಿ ಚೆಕ್ ಬೌನ್ಸ್ ಪ್ರಕರಣ ದಾಖಲಿಸಲಾಗಿದೆ. ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ.

ಸದ್ಯಕ್ಕೆ 05 ಕೋಟಿ ರೂಪಾಯಿ ತೆರಿಗೆಯನ್ನು ತಕ್ಷಣದಲ್ಲೇ ಪಾವತಿಸಬೇಕು. ಮಾಲೀಕರು ಇದಕ್ಕೆ ಒಪ್ಪದಿದ್ದರೆ ಮಾಲ್‌ನಲ್ಲಿರುವ ವಸ್ತುಗಳನ್ನು ವಶಪಡಿಸಿಕೊಳ್ಳಲಾಗುವುದು. ಇದಕ್ಕೆ ಕಾನೂನಿನಲ್ಲಿ ಅವಕಾಶವಿದೆ ಎಂದು ಜಂಟಿ ಆಯುಕ್ತ ಶಿವಸ್ವಾಮಿ ತಿಳಿಸಿದ್ದಾರೆ.

ಮಾಲ್‌ನ ಮಾಲೀಕರು 05 ಕೋಟಿ ರೂ. ಪಾವತಿಸಿರುವ ಡಿಡಿಯನ್ನು ನೀಡಿದ್ದಾರೆ. ಈ ಬಗ್ಗೆ ಪರಿಶೀಲನೆ ನಡೆಯುತ್ತಿದ್ದು, ಅಧಿಕಾರಗಳ ಮುಂದಿನ ನಡೆ ಏನು ಎಂದು ನೋಡಬೇಕಿದೆ.

ಇದನ್ನೂ ಓದಿ: 2023ರ ಚುನಾವಣೆಯಲ್ಲಿ 35 ಕ್ಷೇತ್ರಗಳಲ್ಲಿ ಮಹಿಳೆಯರಿಗೆ ಟಿಕೆಟ್‌ ಮೀಸಲು: ಹೆಚ್‌ಡಿ ಕುಮಾರಸ್ವಾಮಿ

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights