ನಡುರಾತ್ರಿಯಲ್ಲಿ ನದಿಗೆ ಉರುಳಿದ ಬಸ್; ಆರು ಜನರ ದುರ್ಮರಣ!
ನಡುರಾತ್ರಿಯಲ್ಲಿ ಪ್ರಯಾಣಿಸುತ್ತಿದ್ದ ಬಸ್‌ವೊಂದು ನದಿಗೆ ಉರುಳಿದ್ದು, ಬಸ್‌ನಲ್ಲಿದ್ದ ಆರು ಜನರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಮೇಘಾಲಯದ ಶಿಲ್ಲಾಂಗ್ ಜಿಲ್ಲೆಯಲ್ಲಿ ನಡೆದಿದೆ.
ಸುಮಾರು 21 ಜನರು ಪ್ರಯಾಣಿಸುತ್ತಿದ್ದ ಖಾಸಗೀ ಬಸ್ ಶಿಲ್ಲಾಂಗ್ ಸಮೀಪದಲ್ಲಿರುವ ರಿಂಗ್ಡಿ ನದಿಗೆ ಉರುಳಿ ಬಿದ್ದಿದೆ. ಘಟನೆಯಲ್ಲಿ ಬಸ್‌ನಲ್ಲಿದ್ದ ಆರು ಜನರು ಸಾವನ್ನಪ್ಪಿದ್ದಾರೆ. 16 ಜನರನ್ನು ರಕ್ಷಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯ ಬಗ್ಗೆ ಮಾಹಿತಿ ತಿಳಿದ ಕೂಡಲೇ ಪೊಲೀಸರು ಮತ್ತು ರಕ್ಷಣಾ ಸಿಬ್ಬಂದಿಗಳು ಸ್ಥಳಕ್ಕೆ ತೆರಳಿ ರಕ್ಷಣಾ ಕಾರ್ಯಾ ಆರಂಭಿಸಿದ್ದರು. ಆದರೆ, ಬಸ್ ಚಾಲಕ ಸೇರಿದಂತೆ 06 ಜನರು ಆ ಹೊತ್ತಿಗಾಗಲೇ ದುರ್ಘಟನೆಯಲ್ಲಿ ಸಾವನ್ನಪ್ಪಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಉಳಿದ ಪ್ರಯಾಣಿಕರಿಗೆ ಗಾಯಗಳಾಗಿದ್ದು, ಅವರೆಲ್ಲರನ್ನೂ ಸಮೀಪದ ಆಸ್ಪತ್ರೆಗೆ ದಾಖಲಿಸಾಗಿದೆ. ಎಲ್ಲರೂ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಗೆ ಕಾರಣವೇನು ಎಂಬುದು ಇನ್ನೂ ತಿಳಿದು ಬಂದಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: 2023ರ ಚುನಾವಣೆಯಲ್ಲಿ 35 ಕ್ಷೇತ್ರಗಳಲ್ಲಿ ಮಹಿಳೆಯರಿಗೆ ಟಿಕೆಟ್ ಮೀಸಲು: ಹೆಚ್‌ಡಿ ಕುಮಾರಸ್ವಾಮಿ

