ರಾಜ್ಯದಲ್ಲಿ ಶಾಹೀನ್ ಚಂಡಮಾರುತ ಎಫೆಕ್ಟ್ : ಮೂರು ದಿನ ಭಾರೀ ಮಳೆ ಮುನ್ಸೂಚನೆ!
ರಾಜ್ಯದಲ್ಲಿ ಶಾಹೀನ್ ಚಂಡಮಾರುತ ಪರಿಣಾಮ ಬೀರಲಿದ್ದು ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇಂದಿನಿಂದ ಅಕ್ಟೋಬರ್ 3ರವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಮಾನ ಇಲಾಖೆ ನೀಡಿದೆ.
ನಾಳೆ ಶಾಹೀನ್ ಚಂಡಮಾರು ಅಪ್ಪಳಿಸುವ ಹಿನ್ನೆಲೆಯಲ್ಲಿ ಇಂದಿನಿಂದ ಕರ್ನಾಟಕದಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ ಇದೆ. ಅಕ್ಟೋಬರ್ 3ರವರೆಗೂ ಕರ್ನಾಟಕದ ಉತ್ತರ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಹಾಸನ, ಕೊಡಗು, ಚಿತ್ರದುರ್ಗ, ಚಿಕ್ಕಬಳ್ಳಾಪುರ, ದಾವಣಗೆರೆ, ಉಡುಪಿ, ಬಳ್ಳಾರಿ, ಚಿಕ್ಕಮಗಳೂರು, ವೆಂಗಳೂರು, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಉತ್ತರ ಕನ್ನಡ, ರಾಮನಗರ, ಶಿವಮೊಗ್ಗ, ಮಂಡ್ಯ, ತುಮಕೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸೂಚನೆ ನೀಡಲಾಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಬೀದರ್ , ಕಲಬುರ್ಇ, ವಿಜಯಪುರ ಇಂದಿನಿಂದ 4 ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.