11ನೇ ಮಹಡಿಯಿಂದ 5ನೇ ಮಹಡಿಗೆ ಬಿದ್ದು 10 ವರ್ಷದ ಬಾಲಕ ಸಾವು..!

ಮಕ್ಕಳನ್ನು ಆಡಲು ಬಿಟ್ಟು ಮೈಮರೆಯುವ ಪೋಷಕರ ಎದೆ ನಡುಗಿಸುವಂತಹ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಟೆರೆಸ್ ಮೇಲೆ ಆಟವಾಡುತ್ತಿದ್ದ ಬಾಲಕ ಆಯತಪ್ಪಿ ಬಹುಮಹಡಿಯಿಂದ ಕೆಳಗೆ ಬಿದ್ದು ಸಾವನ್ನಪ್ಪಿದ್ದಾನೆ. ನಿನ್ನೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಹೌದು… ಬನಶಂಕರಿ 3ನೇ ಹಂತದಲ್ಲಿರುವ ಶೋಭಾ ವ್ಯಾಲಿ ವ್ಯೂ ಅಪಾರ್ಟ್​​ಮೆಂಟ್​​ನಲ್ಲಿ ಈ ದುರ್ಘಟನೆ ನಡೆದಿದೆ. ಆಟವಾಡುತ್ತಿದ್ದಾನೆಂದು ಮೈಮರೆತ ಪೋಷಕರು ಮಗ ಗಗನ್ ನನ್ನು ಕಳೆದುಕೊಂಡಿದ್ದಾರೆ. ನಿನ್ನೆ ಸಂಜೆ‌ ಅಪಾರ್ಟ್​​ಮೆಂಟ್​​ನ ಟೆರೆಸ್​​ನಲ್ಲಿ ಆಟವಾಡುವಾಗ ಆಯತಪ್ಪಿ 11ನೇ ಮಹಡಿಯಿಂದ 5ನೇ ಮಹಡಿಗೆ ಬಿದ್ದು ಬಾಲಕ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ. ಸಾವನಪ್ಪಿರುವ ಘಟನೆ ರಾಜರಾಜೇಶ್ವರಿ ನಗರ‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಮಗುವನ್ನು ನಿತ್ಯ ಕೆಲಸಕ್ಕೆ ಹೋಗುತ್ತಿದ್ದ ಪೋಷಕರು ಇಂದು ಮಗುವನ್ನೇ ಕಳೆದುಕೊಂಡಿದ್ದಾರೆ. ಎಂದಿನಂತೆ ಪೋಷಕರು ಬಾಲಕನನ್ನು ಬಿಟ್ಟು ಕೆಲಸಕ್ಕೆ ತೆರಳಿದ್ದಾರೆ. ಅದೇನಾಯ್ತು ಅಂತ ಯಾರಿಗೂ ಗೊತ್ತಿಲ್ಲ. ಒಂಟಿಯಾಗಿದ್ದಾಗ ಗಗನ್ ಸ್ನೇಹಿತರ‌ ಜೊತೆ ಆಟವಾಡುವಾಗ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾನೆ‌‌.

ಘಟನೆ ಸಂಬಂಧ ಆರ್.ಆರ್‌.ನಗರ ಪೊಲೀಸ್​ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ‌.

ಬಾಲಕನ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು ವರದಿ ಬರಬೇಕಿದೆ. ಮಗನನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights