ಮಧ್ಯಪ್ರದೇಶದಲ್ಲಿ ಭೀಕರ ಅಪಘಾತ : 7 ಜನ ದುರ್ಮರಣ – 13 ಮಂದಿಗೆ ಗಾಯ!

ಮಧ್ಯಪ್ರದೇಶದ ಭಿಂದ್ ಜಿಲ್ಲೆಯಲ್ಲಿ ಶುಕ್ರವಾರ ಡಂಪರ್‌ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ 7 ಮಂದಿ ಮೃತಪಟ್ಟಿದ್ದು, 13 ಮಂದಿ ಗಾಯಗೊಂಡಿದ್ದಾರೆ.

ಇಂದು ಬೆಳಿಗ್ಗೆ 8 ಗಂಟೆ ಸುಮಾರಿಗೆ ಗ್ವಾಲಿಯರ್‌ನಿಂದ ಇಟಾವಾಕ್ಕೆ ತೆರಳುತ್ತಿದ್ದ ಬಸ್ ಡಂಪರ್‌ಗೆ ಡಿಕ್ಕಿ ಹೊಡೆದಿದೆ ಎಂದು ಹೆಚ್ಚುವರಿ ಎಸ್ಪಿ ಕಮಲೇಶ್ ಖರ್ಪುಸೆ ತಿಳಿಸಿದ್ದಾರೆ. ಗೋಹಡ್ ಪೊಲೀಸ್ ಠಾಣೆ ವ್ಯಾಪ್ತಿಯ ಹರಗೋವಿಂದಪುರ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರ್ಘಟನೆ ಸಂಭವಿಸಿದೆ.

ಗಾಯಗೊಂಡ 13 ಮಂದಿಯನ್ನು ಚಿಕಿತ್ಸೆಗಾಗಿ ಗ್ವಾಲಿಯರ್ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights