ಟಿ-20 ವಿಶ್ವಕಪ್‌ಗೆ ತಯಾರಿ; ಅರ್ಧಕ್ಕೆ ಐಪಿಎಲ್‌ ತೊರೆದ ಕ್ರಿಸ್‌ ಗೇಯ್ಲ್‌!

ಮುಂಬರುವ ಟಿ20 ವಿಶ್ವಕಪ್ ಟೂರ್ನಿಯ ತಯಾರಿಗಾಗಿ ವೆಸ್ಟ್ ಇಂಡೀಸ್ ತಂಡದ ಅಬ್ಬರದ ಬ್ಯಾಟ್ಸ್ ಮನ್ ಕ್ರಿಸ್ ಗೇಯ್ಲ್ ಅವರು ಐಪಿಎಲ್ 2021 ಟೂರ್ನಿಯನ್ನು ಅರ್ಧದಲ್ಲೇ ಬಿಟ್ಟು ಹೊರ ನಡೆದಿದ್ದಾರೆ.

2021ರ ಐಪಿಎಲ್‌ ಟೂರ್ನಿಯಲ್ಲಿ ಪಂಜಾಬ್‌ ಕಿಂಗ್ಸ್‌ ತಂಡದಲ್ಲಿದ್ದ ಕ್ರಿಸ್ ಗೇಯ್ಲ್, ‘ಕಳೆದ ಕೆಲ ತಿಂಗಳಿನಿಂದ ನಾನು ಸಿಡಬ್ಲ್ಯುಐ ಬಬಲ್, ಸಿಪಿಎಲ್ ಬಬಲ್ ನಂತರ ಐಪಿಎಲ್ ಬಬಲ್‍ನ ಭಾಗವಾಗಿದ್ದೇನೆ. ಈಗ ಮುಂಬರು ಟಿ20 ವಿಶ್ವಕಪ್‌ಗೆ ನಾನು ಮಾನಸಿಕವಾಗಿ ಸಿದ್ಧವಾಗಲು ಮತ್ತು ರಿಫ್ರೆಶ್ ಆಗಲು ಬಯಸುತ್ತೇನೆ. ಹೀಗಾಗಿ ಐಪಿಎಲ್‌ ತೊರೆದು ಹೊರಟ್ಟಿದ್ದೇನೆ’ ಎಂದು ಹೇಳಿದ್ದಾರೆ.

ನನಗೆ ಅನುಮತಿ ನೀಡಿದ ಪಂಜಾಬ್ ತಂಡಕ್ಕೆ ಧನ್ಯವಾದಗಳು. ಮುಂಬರುವ ಪಂದ್ಯಗಳಿಗೆ ಶುಭ ಹಾರೈಕೆಗಳು ಎಂದು ಗೇಯ್ಲ್‌ ಹೇಳಿದ್ದಾರೆ.

ಈ ಆವೃತ್ತಿಯ ಮುಂದಿನ ಪಂದ್ಯಗಳಿಗೆ ಗೇಲ್ ಲಭ್ಯ ಇರುವುದಿಲ್ಲ ಎಂದು ಪಂಜಾಬ್ ತಂಡ ಟ್ವೀಟ್ ಮಾಡಿದೆ.

ವಿಶ್ವಕಪ್‍ನಲ್ಲಿ ವೆಸ್ಟ್ ಇಂಡೀಸ್ ತಂಡಕ್ಕೆ ನೆರವಾಗಲು ದುಬೈನಲ್ಲಿ ವಿರಾಮ ಪಡೆಯುತ್ತಿದ್ದೇನೆ ಎಂದು ಗೇಯ್ಲ್‌ ಹೇಳಿದ್ದಾರೆ. ವೆಸ್ಟ್ ಇಂಡೀಸ್ ತಂಡವು 2012 ಮತ್ತು 2016ರ ಟಿ-20 ವಿಶ್ವಕಪ್ ಜಯಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಈ ವರ್ಷ ನಡೆದ ವಿವಿಧ ಕ್ರಿಕೆಟ್‌ ಟೂರ್ನಿಗಳಲ್ಲಿ ಗೇಯ್ಲ್‌ ವೆಸ್ಟ್ ಇಂಡೀಸ್, ಸೈಂಟ್ ಕೀಟ್ಸ್, ನೆವಿಸ್ ಪ್ಯಾಟ್ರಿಯಾಟ್ಸ್, ಕ್ವೆಟ್ಟಾ ಗ್ಲಾಡಿಯೇಟರ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳ ಪರ ಆಡಿದ್ದಾರೆ.

ಕೋವಿಡ್ 19 ಹಿನ್ನೆಲೆಯಲ್ಲಿ ಎಲ್ಲಾ ಟೂರ್ನಿಗಳು ಬಯೋಬಬಲ್ ನಿಯಮಗಳ ಆಡಿಯಲ್ಲಿ ನಡೆದಿತ್ತು. ಹೀಗಾಗಿ ಆಟಗಾರರು ಕೋವಿಡ್ 19 ನಿಯಮವನ್ನು ಉಲ್ಲಂಘಿಸುವಂತಿಲ್ಲ.

ಇದನ್ನೂ ಓದಿ: ಆರ್‌ಟಿಐ ಕಾರ್ಯಕರ್ತನ ಕೊಲೆ ಪ್ರಕರಣ: ಬಿಜೆಪಿ ನಾಯಕ ಸೋಲಂಕಿಗೆ ವಿಧಿಸಿದ್ದ ಜೀವಾವಧಿ ಶಿಕ್ಷೆ ಅಮಾನತುಗೊಳಿಸಿದ ಗುಜರಾತ್ ಹೈಕೋರ್ಟ್‌!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights