ಉತ್ತರ ಪ್ರದೇಶ: ಗರ್ಭಪಾತದ ವೇಳೆ ಅತ್ಯಾಚಾರ ಸಂತ್ರಸ್ತೆ ಸಾವು; ನಾಲ್ವರ ಬಂಧನ

ಕಳೆದ ಆರು ತಿಂಗಳ ಹಿಂದೆ ಅತ್ಯಾಚಾರಕ್ಕೆ ಒಳಗಾಗಿದ್ದ 20 ವರ್ಷದ ದಲಿತ ಯುವತಿ ಗರ್ಭಪಾತದ ವೇಳೆ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಹಮೀರ್‌ಪುರ್‌ನಲ್ಲಿ ನಡೆದಿದೆ. ಆಕೆಯ ಮೇಲಿನ ಅತ್ಯಾಚಾರ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಅತ್ಯಾಚಾರ ಆರೋಪಿ, ಆತನ ತಂದೆ, ಚಿಕ್ಕಪ್ಪ ಮತ್ತು ಗರ್ಭಪಾತ ನಡೆಸುತ್ತಿದ್ದ ವೈದ್ಯರನ್ನು ಪೊಲೀಸರು ಬಂಧಿಸಿದ್ದಾರೆ.

ಹಮೀರ್‌ಪುರದ ಖಾಸಗಿ ಆಸ್ಪತ್ರೆಯಲ್ಲಿ ಗರ್ಭಪಾತ ನಡೆಸಲಾಗುತ್ತಿತ್ತು. ಈ ವೇಳೆ ಸಂತ್ರಸ್ತೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಯುವತಿ ಕಳೆದ ಆರು ತಿಂಗಳ ಹಿಂದೆ ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಅತ್ಯಾಚಾರಕ್ಕೊಳಗಾಗಿದ್ದರು. ಆದರೆ, ಆಕೆ ದೂರು ನೀಡದ ಕಾರಣ ಈ ಬಗ್ಗೆ ಪೊಲೀಸರಿಗೆ ಮಾಹಿತಿ ಇರಲಿಲ್ಲ ಎನ್ನಲಾಗಿದೆ.

ಇದನ್ನೂ ಓದಿ: ಕರ್ನಾಟಕದಲ್ಲಿ ದಸರಾ ರಜೆಯ ನಂತರ 1-5 ತರಗತಿಗಳನ್ನು ತೆರೆಯಲು ಶಿಕ್ಷಣ ಇಲಾಖೆ ಸಿದ್ದತೆ!

ರಕ್ತಸ್ರಾವದಿಂದಾಗಿ ನರಳುತ್ತಿದ್ದ ಸಂತ್ರಸ್ತೆಯನ್ನು ಸೆಪ್ಟಂಬರ್‌ 25 ರಂದು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಈ ವೇಳೆ ಆಕೆ ಗರ್ಭಿಣಿ ಎಂದು ಕುಟುಂಬ ಸದಸ್ಯರಿಗೆ ತಿಳಿದಿದೆ. ಮರುದಿನ ಆಕೆ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆಕೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಶೈಲೇಂದ್ರ ಸಿಂಗ್ ವಿರುದ್ಧ ಬುಧವಾರ ಎಫ್ಐಆರ್ ದಾಖಲಿಸಲಾಗಿದೆ. ಗರ್ಭಪಾತಕ್ಕೆ ಒತ್ತಡ ಹಾಕಿದ್ದ ಆರೋಪಿಯ ತಂದೆ ರಾಮ್ ನಾರಾಯಣ್ ಮತ್ತು ಚಿಕ್ಕಪ್ಪ ಶಿವ ನಾರಾಯಣ್ ಅವರನ್ನು ಬಂಧಿಸಲಾಗಿದೆ.

ಗರ್ಭಪಾತ ನಡೆಸಿದ್ದರಿಂದ ಸಂತ್ರಸ್ತೆ ಸಾವನ್ನಪ್ಪಿದ್ದಾರೆ ಹೀಗಾಗಿ ಖಾಸಗಿ ಆಸ್ಪತ್ರೆ ವೈದ್ಯರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಇದನ್ನೂ ಓದಿ: ಹಾನಗಲ್‌ ಬೈ ಎಲೆಕ್ಷನ್‌: ಜೆಡಿಎಸ್‌ ಅಭ್ಯರ್ಥಿ ಘೋಷಣೆ; ನಿಯಾಜ್ ಶೇಕ್ ಕಣಕ್ಕೆ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights