ಸಿಂದಗಿ, ಹಾನಗಲ್‌ ಗೆಲ್ಲಲು ಬಿಎಸ್‌ವೈ ಆಶ್ರಯಿಸಿದೆ ಬಿಜೆಪಿ!

ಸಿಂದಗಿ ಮತ್ತು ಹಾನಗಲ್ ವಿಧಾನಸಭಾ ಕ್ಷೇತ್ರಗಳಿಗೆ ಅಕ್ಟೋಬರ್ 30ರಂದು ಉಪಚುನಾವಣಾ ಮತದಾನ ನಡೆಯಲಿದೆ. ಈ ಚುನಾವನೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಜನಪ್ರಿಯತೆಯನ್ನು ಆಶ್ರಯಿಸಿ ಗೆಲುವು ಸಾಧಿಸಲು ಬಿಜೆಪಿ ಆಶಿಸಿದೆ. ಲಿಂಗಾಯತ ಪ್ರಾಭಲ್ಯವಿರುವ ಎರಡೂ ಕ್ಷೇತ್ರಗಳಲ್ಲಿ ಲಿಂಗಾಯತ ನಾಯಕ ಬಿಎಸ್‌ವೈ ಅವರ ವರ್ಚಸ್ಸು ಪಕ್ಷವು ಮತಗಳನ್ನು ಗಳಿಸಲು ಸಹಾಯ ಮಾಡುತ್ತದೆ ಎಂದು ಕರ್ನಾಟಕ ಬಿಜೆಪಿಯಲ್ಲಿ ಅನೇಕರು ಆಶಿಸುತ್ತಿದ್ದಾರೆ.

ಬಿಜೆಪಿ ಟಿಕೆಟ್‌ ಆಕಾಂಕ್ಷಿಗಳು ಕೂಡ ಯಡಿಯೂರಪ್ಪ ಅವರ ಮನೆ ಬಾಗಿಲು ತಟ್ಟುತ್ತಿದ್ದಾರೆ. ಅವರು ಪ್ರಚಾರಕ್ಕೆ ಬರಬೇಕು ಎಂದು ಒತ್ತಾಯಿಸಿದ್ದಾರೆ. ಹಾನಗಲ್ ಉಳಿಸಿಕೊಳ್ಳಲು ಮತ್ತು ಸಿಂದಗಿಯನ್ನು ಗೆಲ್ಲಲು ಬಿಜೆಪಿ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ.

ದಾವಣಗೆರೆಯಲ್ಲಿ ಇತ್ತೀಚೆಗೆ ನಡೆದ ಕೋರ್ ಕಮಿಟಿ ಸಭೆಯಲ್ಲಿ ರಾಜ್ಯದ ನಾಯಕರು ಎರಡೂ ಸ್ಥಾನಗಳನ್ನು ಗೆಲ್ಲುವ ಅಗತ್ಯವನ್ನು ಒತ್ತಿ ಹೇಳಿದ್ದಾರೆ. ಒಂದು ವೇಳೆ ಈ ಚುನಾವಣೆಯನ್ನು ಗೆಲ್ಲದಿದ್ದರೆ, 2023ರ ವಿಧಾನಸಭಾ ಚುನಾವಣೆಗೆ 18 ತಿಂಗಳಿಗಿಂತ ಕಡಿಮೆ ಸಮಯ ಇರುವಾಗ ಈ ವಿಫಲತೆ ರಾಜ್ಯದಲ್ಲಿ ಬಿಜೆಪಿ ಬಗೆಗೆ ತಪ್ಪು ಸಂದೇಶವನ್ನು ನೀಡುತ್ತದೆ ಎಂದು ಭಾವಿಸಲಾಗಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ತವರು ಜಿಲ್ಲೆಯಾದ ಹಾವೇರಿ ಜಿಲ್ಲೆಯ ಹಾನಗಲ್ ಕ್ಷೇತ್ರವನ್ನು ಗೆಲ್ಲುವುದು ಅವರಿಗೆ ಪ್ರತಿಷ್ಠೆಯ ವಿಷಯವಾಗಿದೆ. ಪಕ್ಷದ ಅಭ್ಯರ್ಥಿಯನ್ನು ಘೋಷಿಸಿದ ನಂತರ ಬೊಮ್ಮಾಯಿ ಅವರು ತನ್ನ ಕ್ಯಾಬಿನೆಟ್ ಸಹೋದ್ಯೋಗಿಗಳೊಂದಿಗೆ ಪ್ರಚಾರ ಮಾಡಲಿದ್ದಾರೆ. ಬಿಜೆಪಿ ಸಿಂದಗಿಯಲ್ಲಿ ರಮೇಶ್ ಭೂಸನೂರ್ ಮತ್ತು ಹಾನಗಲ್‌ನಲ್ಲಿ ರೇವತಿ ಉದಾಸಿ (ದಿವಂಗತ ಸಿ.ಎಂ ಉದಾಸಿ ಅವರ ಸೊಸೆ) ಅವರನ್ನು ಕಣಕ್ಕಿಳಿಸುವ ಸಾಧ್ಯತೆಯಿದೆ.

Read Also: ಜೆಡಿಎಸ್‌ ತೊರೆದು ಬಿಜೆಪಿ ಸೇರುತ್ತೇನೆ: ವಿಧಾನ ಪರಿಷತ್ ಸದಸ್ಯ ಸಂದೇಶ್ ನಾಗರಾಜ್ ಘೋಷಣೆ!

ಉಪಚುನಾವಣೆಯಲ್ಲಿ ಯಡಿಯೂರಪ್ಪ ಅವರು ಪ್ರಚಾರ ಮಾಡದೇ ಇರುವುದು ತಪ್ಪು ಸಂದೇಶವನ್ನು ನೀಡುತ್ತದೆ. ಇದು ಬಿಜೆಪಿ ವಿರುದ್ಧ ಪ್ರತಿಪಕ್ಷಗಳ ಆಕ್ರಮಣಕ್ಕೆ ಪುಷ್ಟಿ ನೀಡುತ್ತದೆ ಎಂದು ಹಿರಿಯ ಬಿಜೆಪಿ ಮುಖಂಡರೊಬ್ಬರು ಹೇಳಿದ್ದಾರೆ.

ಯಡಿಯೂರಪ್ಪ ಸಿಎಂ ಸ್ಥಾನದಿಂದ ಕೆಳಗಿಳಿದಿರಬಹುದು… ಆದರೆ ಅವರು ಪಕ್ಷಕ್ಕೆ ಅನಿವಾರ್ಯ. ಅವರು ಕೇವಲ 10 ನಿಮಿಷಗಳ ಭಾಷಣ ಮಾಡಿದರೂ, ಅದು ಪಕ್ಷಕ್ಕೆ ಸಹಾಯ ಮಾಡುತ್ತದೆ’’ ಎಂದು ಅವರು ಹೇಳಿದ್ದಾರೆ.

ಮೂಲಗಳ ಪ್ರಕಾರ, ಸಿಂದಗಿಯಲ್ಲಿ ಪಕ್ಷದ ಮುಂಚೂಣಿಯಲ್ಲಿರುವ ಭೂಸನೂರ್ ಅವರು ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಪ್ರಚಾರ ಮಾಡುವಂತೆ ಒತ್ತಾಯಿಸಿದ್ದಾರೆ.

ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್ ರವಿಕುಮಾರ್ ಅವರು ಯಡಿಯೂರಪ್ಪ, ಬೊಮ್ಮಾಯಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಸಾಮೂಹಿಕ ನಾಯಕತ್ವದಲ್ಲಿ ಉಪಚುನಾವಣೆಯನ್ನು ಎದುಸುವುದಾಗಿ ಹೇಳಿದ್ದಾರೆ.

ಏತನ್ಮಧ್ಯೆ, ಭಾನುವಾರ ಬೆಂಗಳೂರಿನಲ್ಲಿ ನಡೆಯಲಿರುವ ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆಯಲ್ಲಿ ಪಕ್ಷದ ನಾಯಕರು ಮತ್ತು ಕಾರ್ಯಕರ್ತರು ಉಪಚುನಾವಣೆಯನ್ನು ಎದುರಿಸಲು ಸ್ಪಷ್ಟ ಮಾರ್ಗಸೂಚಿಯನ್ನು ನೀಡುವ ನಿರೀಕ್ಷೆಯಿದೆ.

Read Also: ಮುರುಘಾ ಮಠ: ಸಿಎಂ ಬೊಮ್ಮಾಯಿಗೆ ‘ಬಸವಭೂಷಣ’ ಮತ್ತು ಮಾಜಿ ಸಿಎಂ ಬಿಎಸ್‌ವೈಗೆ ‘ಶರಣಶ್ರೀ’ ಪ್ರಶಸ್ತಿ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights