ದೇಶದಲ್ಲಿಂದು ನಿನ್ನೆಗಿಂತ ಕಡಿಮೆ ಕೊರೊನಾ ಕೇಸ್ ದಾಖಲು : ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಕೆ!

ದೇಶದಲ್ಲಿ 22,842 ಹೊಸ ಕೋವಿಡ್ -19 ಪ್ರಕರಣಗಳನ್ನು ವರದಿಯಾಗಿದ್ದು ನಿನ್ನೆಗಿಂತ 6.2% ಕಡಿಮೆ ಕೊರೊನಾ ಕೇಸ್ ದಾಖಲಾಗಿದೆ.

ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 22,842 ಹೊಸ ಕೋವಿಡ್ -19 ಪ್ರಕರಣಗಳು ದಾಖಲಾಗಿವೆ. ಇದು ನಿನ್ನೆಗಿಂತ ಶೇಕಡಾ 6.2 ರಷ್ಟು ಕಡಿಮೆಯಾಗಿದೆ. ಇದರೊಂದಿಗೆ ದೇಶದ ಒಟ್ಟು ಪ್ರಕರಣಗಳ ಸಂಖ್ಯೆ 3,38,13,903 ಕ್ಕೆ ತಲುಪಿದೆ.

ಶನಿವಾರದ ದೈನಂದಿನ 24,354 ಹೊಸ ಕೋವಿಡ್ -19 ಪ್ರಕರಣಗಳು ದಾಖಲಾಗಿದ್ದು ಇದು ಶುಕ್ರವಾರ ದಾಖಲಾದ ಪ್ರಕರಣಗಳಿಗಿಂತ ಶೇಕಡಾ 8.9 ರಷ್ಟು ಕಡಿಮೆಯಾಗಿದೆ. ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿದ ಇತ್ತೀಚಿನ ಮಾಹಿತಿಯ ಪ್ರಕಾರ, ದೇಶದಲ್ಲಿ 244 ಸಾವುಗಳು ವರದಿಯಾಗಿದ್ದು, ದೇಶದ ಒಟ್ಟು ಸಾವಿನ ಸಂಖ್ಯೆ 4,48,817 ಕ್ಕೆ ಏರಿಕೆಯಾಗಿದೆ.

ಭಾರತದ ಚೇತರಿಕೆಯ ದರವು ಈಗ ಶೇಕಡ 97.87 ರಷ್ಟಿದೆ. ಕಳೆದ 24 ಗಂಟೆಗಳಲ್ಲಿ ಒಟ್ಟು 25,930 ರೋಗಿಗಳು ಚೇತರಿಸಿಕೊಂಡಿದ್ದಾರೆ. ದೇಶದಾದ್ಯಂತ ಒಟ್ಟು 3,30,94,529 ಜನ ಕೊರೊನಾದಿಂದ ಚೇತರಿಸಿಕೊಂಡಿದ್ದಾರೆ. ಕಳೆದ 24 ಗಂಟೆಗಳಲ್ಲಿ ಸಕ್ರಿಯ ಪ್ರಕರಣಗಳು 3,332 ರಷ್ಟು ಕಡಿಮೆಯಾಗಿದ್ದು ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 2,70,557 ರಷ್ಟಿದೆ.

22,842 ಹೊಸ ಕೋವಿಡ್ -19 ಪ್ರಕರಣಗಳಲ್ಲಿ ಕೇರಳದಲ್ಲೇ ಅತೀ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಕೇರಳದಲ್ಲಿ 13,217 ಪ್ರಕರಣಗಳು, ಮಹಾರಾಷ್ಟ್ರದಲ್ಲಿ 2,696 ಪ್ರಕರಣಗಳು, ತಮಿಳುನಾಡು 1,578, ಮಿಜೋರಾಂ 1,276 ಮತ್ತು ಆಂಧ್ರಪ್ರದೇಶದಲ್ಲಿ 865 ಪ್ರಕರಣಗಳು ದಾಖಲಾಗಿವೆ.

ಕಳೆದ 24 ಗಂಟೆಗಳಲ್ಲಿ 73,76,846 ಕೋವಿಡ್ ಡೋಸ್ ನೀಡಲಾಗಿದ್ದು, ಈವರೆಗೆ ಒಟ್ಟು 90,51,75,348 ಡೋಸ್ ನೀಡಲಾಗಿದೆ. ಕಳೆದ 24 ಗಂಟೆಗಳಲ್ಲಿ ಒಟ್ಟು 12,65,734 ಮಾದರಿಗಳನ್ನು ಪರೀಕ್ಷಿಸಲಾಗಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights