ಸ್ಯಾಂಡಲ್‌ವುಡ್‌ನ ಡಿಂಪಲ್ ಕ್ವೀನ್ ರಚ್ಚಿ ಮತ್ತು ನಟ ಅಭಿಷೇಕ್ ಗೆ ಇಂದು ಹುಟ್ಟುಹಬ್ಬದ ಸಂಭ್ರಮ..!

ಸ್ಯಾಂಡಲ್‌ವುಡ್‌ನ ಡಿಂಪಲ್ ಕ್ವೀನ್ ರಚ್ಚಿ ಹಾಗೂ ರೆಬೆಲ್ ಸ್ಟಾರ್ ಅಂಬರೀಷ್ ಪುತ್ರ ನಟ ಅಭಿಷೇಕ್ ಇಂದು (ಅಕ್ಟೋಬರ್ 3) ಹುಟ್ಟುಹಬ್ಬದ ಸಂಭ್ರಮದಲ್ಲಿದ್ಧಾರೆ.
ರಚಿತಾ ರಾಮ್‌ ಈಗ ಸ್ಯಾಂಡಲ್​​ವುಡ್​​ನಲ್ಲಿ ಬಹುಬೇಡಿಕೆಯ ನಟಿ. ‘ಅರಸಿ’ ಧಾರಾವಾಹಿಯ ಮೂಲಕ ಹೆಸರು ಗಳಿಸಿದ ರಚಿತಾ ರಾಮ್, ನಂತರ ದರ್ಶನ್ ಜೊತೆ ‘ಬುಲ್​ ಬುಲ್​​’ ಚಿತ್ರದಲ್ಲಿ ಅಭಿನಯಿಸುವ ಮೂಲಕ ಚಿತ್ರರಂಗ ಪ್ರವೇಶಿಸಿದರು. ಇದಾದ ಬಳಿಕ ಗಣೇಶ್‌ ಅಭಿನಯದ ‘ದಿಲ್ ರಂಗೀಲಾ’, ಸುದೀಪ್‌ ನಟನೆಯ ‘ರನ್ನ’ ಸೇರಿದಂತೆ ‘ರಥಾವರ’, ‘ಚಕ್ರವ್ಯೂಹ’ ಮುಂತಾದ ಹಲವು ಚಿತ್ರಗಳಲ್ಲಿ ಅಭಿನಯಿಸಿ ಅಭಿಮಾನಗಳ ಮನಸ್ಸು ಗೆದ್ದಿದ್ದಾರೆ. ಅಷ್ಟೇ ಅಲ್ಲದೆ, ‘ರನ್ನ’ ಚಿತ್ರದ ಅಭಿನಯಕ್ಕಾಗಿ ಸೈಮಾ ಉತ್ತಮ ನಟಿ ಪ್ರಶಸ್ತಿ ಮತ್ತು ಫಿಲ್ಮ್‌ಫೇರ್ ಸೌಥ್ ಪ್ರಶಸ್ತಿಯನ್ನೂ ಪಡೆದಿದ್ದಾರೆ.
ಹಿರಿತೆರೆಯಲ್ಲಿ ಮಾತ್ರವಲ್ಲ, ಕಿರುತೆರೆಯಲ್ಲೂ ರಚಿತಾ ಸೈ ಎನಿಸಿಕೊಂಡವರು. ಕನ್ನಡದ ರಿಯಾಲಿಟಿ ಶೋ ‘ಕಾಮಿಡಿ ಟಾಕೀಸ್’, ‘ಮಜಾಭಾರತ- 2’ ಕಾರ್ಯಕ್ರಮಗಳಲ್ಲಿ ತೀರ್ಪುಗಾರರಾಗಿಯೂ ಕಾಣಿಸಿಕೊಂಡಿದ್ದರು. ರಚಿತಾ ಹುಟ್ಟುಹಬ್ಬದ ಪ್ರಯುಕ್ತ ಇಂದು ‘ಲವ್ ಯೂ ರಚ್ಚು’ ಸಿನಿಮಾದ ಲಿರಿಕಲ್​ ಸಾಂಗ್​ ರಿಲೀಸ್ ಮಾಡುವ ಮೂಲಕ ಅಭಿಮಾನಿಗಳಿಗೆ ಗಿಫ್ಟ್ ನೀಡಿದ್ದಾರೆ. ಇನ್ನೊಂದೆಡೆ, ಡಿಂಪಲ್ ಕ್ವೀನ್‌ಗೆ ಅಭಿಮಾನಿಗಳು, ಸಿನಿಮಾ ಗಣ್ಯರು ಸಾಮಾಜಿಕ ಜಾಲತಾಣದಲ್ಲಿ ಶುಭ ಹಾರೈಸುತ್ತಿದ್ದಾರೆ.
ಇನ್ನೂ ಅಭಿಷೇಕ್​ ತಮ್ಮ ನಟನೆ ಮೂಲಕ ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ. ಅವರ ಜನ್ಮದಿನದ ಪ್ರಯುಕ್ತ ಕಾಮನ್​ ಡಿಪಿ ಅನಾವರಣ ಮಾಡಲಾಗಿದೆ. ನಟಿ, ಸಂಸದೆ ಸುಮಲತಾ ಅಂಬರೀಷ್​ ಕಾಮನ್​ ಡಿಪಿ ಅನಾವರಣ ಮಾಡಿದ್ದಾರೆ.  ಈ ಫೋಟೋಗಳನ್ನು ಅಭಿಮಾನಿಗಳು ತಮ್ಮ ಡಿಪಿಗೆ ಹಾಕಿಕೊಂಡು ಸಂಭ್ರಮಿಸುತ್ತಿದ್ದಾರೆ. ಸೆಲೆಬ್ರಿಟಿಗಳು ಹಾಗೂ ಅಭಿಮಾನಿಗಳು ಅಭಿಷೇಕ್​ಗೆ ಶುಭಾಶಯ ಕೋರುತ್ತಿದ್ದಾರೆ. 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights