‘ದೇಶದಲ್ಲಿ ಅನ್ನದಾತರಿಗೆ ರಕ್ಷಣೆ ಇಲ್ಲ’ – ಬಿಜೆಪಿ ವಿರುದ್ಧ ಡಿಕೆ ಶಿವಕುಮಾರ್ ಕಿಡಿ!

ದೇಶದಲ್ಲಿ ಅನ್ನದಾತರಿಗೆ ರಕ್ಷಣೆ ಇಲ್ಲ ಎಂದು ಬಿಜೆಪಿ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕಿಡಿ ಕಾರಿದ್ದಾರೆ.

‘ದೇಶದಲ್ಲಿ ಅನ್ನದಾತರಿಗೆ ರಕ್ಷಣೆ ಇಲ್ಲ. ಲಖಿಂಪುರ್ ಖೇರಿ ಹಿಂಸಾಚಾರದಲ್ಲಿ ನಾಲ್ವರು ರೈತರು ಸಾವನ್ನಪ್ಪಿದ್ದಾರೆ. ಇದಕ್ಕೆ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರು ರಾಜೀನಾಮೆ ಕೊಡಬೇಕು. ಸ್ಥಳಕ್ಕೆ ಭೇಟಿ ನೀಡಲು ಪ್ರಯಾಂಕ ಗಾಂಧಿಯನ್ನು ಬಿಡದೆ ಬಂಧಿಸಿದ್ದಾರೆ. ಅವರನ್ನು ಎಳೆದಾಡಿದ್ದಾರೆ. ಇದು ದೇಶದ ಪ್ರತಿಯೊಂದು ಹೆಣ್ಣಿಗೆ ಮಾಡಿದ ಅವಮಾನ ” ಎಂದು ಬಿಜೆಪಿ ವಿರುದ್ಧ ಕಿಡಿ ಕಾರಿದ್ದಾರೆ.

ಇನ್ನೂ “ಲಖಿಂಪುರ್ ಖೇರಿ ಹಿಂಸಾಚಾರದಲ್ಲಿ ರೈತರು ಸಾವನ್ನಪ್ಪಿದ್ದಾರೆ. ಇದರಕ್ಕೆ ಕಾರಣರಾದ ಕೇಂದ್ರ ಪುತ್ರನನ್ನು ಗುಂಡಾಯ ಕಾಯ್ದೆಯಲ್ಲಿ ಬಂಧಿಸಬೇಕು. ಕೂಡಲೆ ಅವರ ವಿರುದ್ಧ ಕ್ರಮ ಜಾರಿಗೊಳಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ಮಾಡುವುದಾಗಿ” ಮೈಸೂರಿನಲ್ಲಿ ಕಬ್ಬು ಬೆಳೆಗಾರರ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಎಚ್ಚರಿಕೆ ನೀಡಿದ್ದಾರೆ.

ಉತ್ತರ ಪ್ರದೇಶ ಉಪ ಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಅವರ ಭೇಟಿಯ ವಿರುದ್ಧ ನಡೆದ ರೈತರ ಪ್ರತಿಭಟನೆಯ ಸಂದರ್ಭದಲ್ಲಿನ ಹಿಂಚಾರದಲ್ಲಿ 4 ಜನ ರೈತರು ಸೇರಿ 8 ಮಂದಿ ಮೃತಪಟ್ಟಿದ್ದಾರೆ. ಪ್ರಕರಣದಲ್ಲಿ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರನ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ಆದರೆ ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟಿಸುತ್ತಿದ್ದ ರೈತರ ಮೇಲೆ ಕಾರು ಹರಿಸಿದ ಗಂಭೀರ ಆರೋಪ ರೈತ ಸಂಘಟನೆಗಳು ಮಾಡಿದ್ದು ಸೂಕ್ತ ಕ್ರಮಕ್ಕೆ ಆಗ್ರಹಿಸಿದ್ದಾರೆ. ಕೂಡಲೆ ಅವರನ್ನು ಬಂಧಿಸುವಂತೆ ಆಗ್ರಹಿಸಿ ಇಂದು ದೇಶಾದ್ಯಂತ ಪ್ರತಿಭಟನೆಗೆ ಕರೆ ನೀಡಿದ್ದಾರೆ.

 

Spread the love

Leave a Reply

Your email address will not be published. Required fields are marked *