ಮುಂಬೈ-ಗೋವಾ ಕ್ರೂಸ್ ಹಡಗಿನಲ್ಲಿ ರೇವ್ ಪಾರ್ಟಿ; 10 ಜನರ ಬಂಧನ!

ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB) ಭಾನುವಾರ ಪ್ರಯಾಣಿಕರ ಕ್ರೂಸ್ ಹಡಗಿನ ಮೇಲೆ ದಾಳಿ ನಡೆಸಿದ್ದು, ರೇವ್‌ ಪಾರ್ಟಿಯಲ್ಲಿ ಡ್ರಗ್ಸ್ ಬಳಸುತ್ತಿದ್ದ ಸುಮಾರು 10 ಜನರನ್ನು ಬಂಧಿಸಿದೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

ಬಂಧಿತರ ಪಟ್ಟಿಯಲ್ಲಿ ಸೆಲೆಬ್ರಿಟಿ ಅಥವಾ ಉನ್ನತ ವ್ಯಕ್ತಿಗೆ ಸಂಬಂಧ ಹೊಂದಿರುವ ಕೆಲವರನ್ನೂ ಇದ್ದಾರೆ ಎಂದು ಅಧಿಕಾರಿ ದೃಢಪಡಿಸಿದ್ದಾರೆ.

ಹಡಗಿನಲ್ಲಿ ಪಾರ್ಟಿಯನ್ನು ಆಯೋಜಿಸಲಾಗಿದೆ ಎಂಬ ಸುಳಿವಿನ ಆಧಾರದ ಮೇಲೆ, ಅಲ್ಲಿನ ವಲಯ ನಿರ್ದೇಶಕ ಸಮೀರ್ ವಾಂಖೆಡೆ ನೇತೃತ್ವದ ಎನ್‌ಸಿಬಿ ತಂಡವು ಶನಿವಾರ ಸಂಜೆ ಗೋವಾಕ್ಕೆ ತೆರಳಿದ ಕ್ರೂಸ್ ಹಡಗಿನ ಮೇಲೆ ದಾಳಿ ನಡೆಸಿದೆ. ಈ ವೇಳೆ ಕೆಲವು ಪ್ರಯಾಣಿಕರಿಂದ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

“ಏಜೆನ್ಸಿಯು 8 ರಿಂದ 10 ಜನರನ್ನು ಬಂಧಿಸಿದೆ. ಅವರನ್ನು ದಕ್ಷಿಣ ಮುಂಬೈನ ಎನ್‌ಸಿಬಿ ಕಚೇರಿಗೆ ಕರೆತರಲಾಗಿದೆ. ಅವರನ್ನು ಮುಂಜಾನೆಯವರೆಗೆ ವಿಚಾರಣೆಗೆ ಒಳಪಡಿಸಲಾಗಿತ್ತು” ಎಂದು ಅವರು ಹೇಳಿದ್ದಾರೆ.

ಎನ್‌ಸಿಬಿ ಕಚೇರಿಯ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ವಾಂಖೇಡೆ, “ನಾವು ಕೆಲವು ವ್ಯಕ್ತಿಗಳನ್ನು ಬಂಧಿಸಿದ್ದೇವೆ. ಅವರ ತನಿಖೆ ಮುಂದುವರಿದಿದೆ. ವಿಚಾರಣೆ ವೇಳೆ ಬಂಧಿತರಲ್ಲಿ ಕೆಲವು ಸೆಲೆಬ್ರಿಟಿಗಳೊಂದಿಗೆ ಸಂಬಂಧ ಹೊಂದಿದ್ದಾರೆ ಎಂದು ತಿಳಿದು ಬಂದಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಲಖಿಂಪುರ ರೈತರ ಹತ್ಯೆ ಖಂಡಿಸಿ ಬೆಂಗಳೂರಿನಲ್ಲಿ ಭುಗಿಲೆದ್ದ ಆಕ್ರೋಶ; ರಾಷ್ಟ್ರಪತಿಗಳ ಮಧ್ಯಪ್ರವೇಶಕ್ಕೆ ಆಗ್ರಹ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights