ಶುರುವಾಗ್ತಿದೆ ಪ್ರೊ ಕಬಡ್ಡಿ; ಡಿ. 22ರಿಂದ ಕ್ರೀಡೆಗೆ ಬೆಂಗಳೂರಿನಲ್ಲಿ ಅಖಾಡ ರೆಡಿ!

ಪ್ರೊ ಕಬಡ್ಡಿ ಲೀಗ್ (ಪಿಕೆಎಲ್)ನ ಎಂಟನೇ ಆವೃತ್ತಿ ಆರಂಭವಾಗುತ್ತಿದೆ. ಡಿಸೆಂಬರ್ 22 ರಂದು ಬೆಂಗಳೂರಿನಲ್ಲಿ ಮೊದಲ ಪಂದ್ಯ ನಡೆಯಲಿದೆ. ಆದರೆ, ಕೊರೊನಾ ಹಿನ್ನಲೆಯಲ್ಲಿ ಕ್ರೀಡಾಂಗಣದಲ್ಲಿ ಯಾವುದೇ ಪ್ರೇಕ್ಷಕರಿಲ್ಲದೆ ನಡೆಯಲಿದೆ.

ಈ ಸೀಸನ್‌ನಲ್ಲಿ ಆಡುವ ಆಟಗಾರರ ಹರಾಜು ಆಗಸ್ಟ್ 29-31 ರಂದು ಮುಂಬೈನಲ್ಲಿ ನಡೆಸಲಾಗಿತ್ತು. ಆಟಗಾರರು ಮತ್ತು ಎಲ್ಲಾ ಪಾಲುದಾರರ ಆರೋಗ್ಯ ಮತ್ತು ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು, ಈ ವರ್ಷ ಲೀಗ್ ಅನ್ನು ಒಂದೇ ಸ್ಥಳದಲ್ಲಿ ನಡೆಸಲು ನಿರ್ಧರಿಸಿದ್ದು, ಎಲ್ಲಾ ಆಟಗಳು ಬೆಂಗಳೂರಿನಲ್ಲಿ ನಡೆಯಲಿವೆ ಎಂದು ಕ್ರೀಡಾಕೂಟದ ಆಯೋಜಕರಾದ ಮಾಶಾಲ್ ಸ್ಪೋರ್ಟ್ಸ್ ಹೇಳಿದೆ.

ಪಿಕೆಎಲ್ ಸೀಸನ್ 8 ರ ಕುರಿತು ಮಾತನಾಡಿದ ಮಾಶಾಲ್ ಸ್ಪೋರ್ಟ್ಸ್ ಸಿಇಒ ಅನುಪಮ್ ಗೋಸ್ವಾಮಿ, “ಉತ್ತಮ ಸುರಕ್ಷತೆಯೊಂದಿಗೆ ಸ್ಪರ್ಧಾತ್ಮಕ ಕ್ರೀಡಾಕೂಟಗಳನ್ನು ನಡೆಸಲು ಬೆಂಗಳೂರಿನಲ್ಲಿ ಎಲ್ಲಾ ಸೌಲಭ್ಯಗಳಿವೆ. ಪಿಕೆಎಲ್ ಸೀಸನ್ 8 ರ ಕ್ರೀಡಾಕೂಟಕ್ಕಾಗಿ ಎದುರು ನೋಡುತ್ತಿದ್ದೇವೆ..” ಎಂದು ಹೇಳಿದ್ದಾರೆ.

“ಕಬಡ್ಡಿ ಭಾರತದ ನಿಜವಾದ ಸ್ಥಳೀಯ ಕ್ರೀಡೆಯಾಗಿದೆ. ಅಲ್ಲದೆ ಇದು ಕರ್ನಾಟಕದಲ್ಲಿ ಬಹಳ ಜನಪ್ರಿಯವಾಗಿದೆ. ನಮ್ಮ ರಾಜ್ಯದಲ್ಲಿ ಮುಂಬರುವ ಪ್ರೊ ಕಬಡ್ಡಿ ಸೀಸನ್ 8 ರ ಪಂದ್ಯಾಟವನ್ನು ನಾವು ಸ್ವಾಗತಿಸುತ್ತೇವೆ ಮತ್ತು ಬೆಂಬಲಿಸುತ್ತೇವೆ” ಎಂದು ಸಿಎಂ ಬೊಮ್ಮಾಯಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಸರ್ಕಾರದ ನಿಯಮಾವಳಿಗಳು ಮತ್ತು ಮಾರ್ಗಸೂಚಿಗಳನ್ನು ಅನುಸುವುದಾಗಿ ಪ್ರೊ ಕಬಡ್ಡಿ ಸಂಘಟಕರು ಹೇಳಿದ್ದು, ಅದಕ್ಕಾಗಿ ಬಯೋ ಬಬಲ್ ಅನ್ನು ನಿರ್ಮಿಸುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ: ಬೆಳಗಾವಿ ಯುವಕನ ಬರ್ಬರ ಹತ್ಯೆ; 7 ಹಿಂದೂತ್ವವಾದಿ ಕಾರ್ಯಕರ್ತರ ಬಂಧನ

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights