ಎಲ್ ಪಿಜಿ ಅಡುಗೆ ಸಿಲಿಂಡರ್ ಗ್ರಾಹಕರಿಗೆ ಬೆಲೆ ಏರಿಕೆ ಶಾಕ್..!

ದೇಶದಲ್ಲಿ ಪದೇ ಪದೇ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆಯಿಂದಾಗಿ ಜನ ಹೈರಾಣಾಗಿ ಹೋಗಿದ್ದಾರೆ. ಅಕ್ಟೋಬರ್ ಮೊದಲ ದಿನವೇ ಪೆಟ್ರೋಲಿಯಂ ಕಂಪನಿಗಳು ಅನಿಲದ ಬೆಲೆಯನ್ನು ಹೆಚ್ಚಿಸಿದ್ದವು. ವಾಣಿಜ್ಯ ಸಿಲಿಂಡರ್ ಗಳ ಬೆಲೆಯನ್ನು 43.5 ರೂಪಾಯಿಗಳಷ್ಟು ಏರಿಕೆ ಮಾಡಿದ್ದವು. ಆದ್ರೆ ಈಗ ಗ್ರಾಹಕರಿಗೆ ಎಲ್ ಪಿಜಿ ಅಡುಗೆ ಸಿಲಿಂಡರ್ ದರ ಏರಿಕೆ ಶಾಕ್ ಕೊಟ್ಟಿದೆ.

ಕೊರೊನಾದಿಂದ ಈಗಾಗಲೇ ಆರ್ಥಿಕ ಸಂಕಷ್ಟದಲ್ಲಿರು ಜನರಿಗೆ ಇದು ಗಾಯದ ಮೇಲೆ ಬರೆ ಎಳೆದಂತಾಗಿದೆ. ಎಲ್ ಪಿಸಿ ಅಡುಗೆ ಸಿಲಿಂಡರ್ ಬೆಲೆ ಮತ್ತೆ 15ರೂ. ಹೆಚ್ಚಳವಾಗಿದೆ. ದೇಶಾದ್ಯಂತ ಇಂದಿನಿಂದಲೇ ಹೊಸ ದರ ಜಾರಿಯಾಗಲಿದೆ.

ಬಲೆ ಏರಿಕೆ ಬಳಿಕ ಕರ್ನಾಕದಲ್ಲಿ ಸಿಲಿಂಡರ್ ದರ 902.5ರೂ ಆಗಲಿದ್ದು ದೆಹಲಿಯಲ್ಲಿ 14.2 ಕೆಜಿ ಸಿಲಿಂಡರ್ ದರ 899.50ರೂ ಇರಲಿದೆ.

ಕೊರೊನಾ ಕಷ್ಟ ಕಾಲದಲ್ಲಿ ಜನ ಜೀವನ ಮಾಡುವುದೇ ಕಷ್ಟವಾಗಿದೆ. ದುಡಿಮೆ ಇಲ್ಲ. ದುಡಿದರೂ ಸರಿಯಾಗಿ ಸಂಬಳ ಕೈಗೆ ಸಿಗುತ್ತಿಲ್ಲ. ಅದೆಷ್ಟೋ ಜನ ಕೆಲಸ ಕಳೆದುಕೊಂಡಿದ್ದಾರೆ. ಇನ್ನು ಕೆಲವರು ಮನೆಯಲ್ಲಿರುವ ವಸ್ತುಗಳನ್ನು ಮಾರಿ ಜೀವನ ಸಾಗಿಸುತ್ತಿದ್ದಾರೆ. ಹೀಗಿರುವಾಗ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಲೇ ಇದ್ದರೆ ಜನ ಜೀವನ ಸಾಗಿಸುವುದಾದರೂ ಹೇಗೆ ಎಂದು ಪ್ರಶ್ನೆ ಮಾಡುತ್ತಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights