ಬೆಳಗಾವಿಯಲ್ಲಿ ಮನೆ ಕುಸಿದು 7 ಮಂದಿ ಸಾವು : ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ!

ಬೆಳಗಾವಿಯಲ್ಲಿ ಮನೆ ಕುಸಿತದಿಂದಾಗಿ 6 ಮಂದಿ ಹಾಗೂ ಬಾಲಕಿ ಸಾವನ್ನಪ್ಪಿದ್ದ ದುರಂತದಲ್ಲಿ ಸಾವನ್ನಪ್ಪಿದ ಕುಟುಂಬಗಳಿಗೆ ಪ್ರಧಾನಿ ನರೇಂದ್ರ ಮೋದಿ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದಾರೆ.

ಬೆಳಗಾವಿಯಲ್ಲಿ ಮನೆ ಕುಸಿತದಿಂದ ಜೀವಹಾನಿಯಾಗಿರುವುದು ದು:ಖಕರ ಸಂಗತಿಯಾಗಿದೆ. ತಮ್ಮವರನ್ನು ಕಳೆದುಕೊಂಡ ಕುಟುಂಬಸ್ಥರೊಂದಿಗೆ ನಾವಿದ್ದೇವೆ. ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಮೋದಿ ಅಧಿಕೃತ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡಿದ್ದಾರೆ.

ತಡರಾತ್ರಿ ಭಾರೀ ಮಳೆಗೆ ಬೆಳಗಾವಿಯ ಬಡಲಾ ಅಂಕಲಗಿ ಗ್ರಾಮದಲ್ಲಿ ಮನೆ ಕುಸಿದಿದ್ದು, ಸ್ಥಳದಲ್ಲೇ ಐವರು ಕೊನೆಯುಸಿರೆಳೆದರು. ಆಸ್ಪತ್ರೆಗೆ ಸಾಗಿಸುವಾಗ ಇನ್ನಿಬ್ಬರು ಸಾವನ್ನಪ್ಪಿದ್ದಾರೆ. ತಕ್ಷಣ ಸ್ಥಳಕ್ಕೆ ಭೇಟಿ ಕೊಟ್ಟ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಮೃತರ ಕುಟುಂಬಸ್ಥರಿಗೆ ಸಾಂತ್ವಾನ ನೀಡಿದ್ದಾರೆ. ಜಿಲ್ಲಾಡಳಿತವೇ ಒಂದೇ ಕುಟುಂಬದ 6 ಜನರ ಅಂತ್ಯಕ್ರಿಯೆ ಮಾಡಿದೆ. ಇನ್ನೋವರ ಬಾಲಕಿಯ ಅಂತ್ಯಕ್ರಿಯೆಯೂ ಮಾಡಲಾಗಿದೆ.

ಇನ್ನೂ ಸಿಎಂ ಬಸವರಾಜ್ ಬೊಮ್ಮಾಯಿ ಘಟನೆ ಬಗ್ಗೆ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಸ್ಥರಿಗೆ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights