ಯಾದಗಿರಿ: ಅಣ್ಣನಿಂದಲೇ ತಂಗಿಯ ಮೇಲೆ ಅತ್ಯಾಚಾರ; ಆರೋಪಿ ಬಂಧನ

ಸ್ವಂತ ಅಣ್ಣನೇ ತನ್ನ ತಂಗಿಯ ಮೇಲೆ ಅತ್ಯಾಚಾರ ಎಸಗಿರುವ ಹೇಯ ಕೃತ್ಯ ಯಾದಗಿರಿ ಜಿಲ್ಲೆಯಲ್ಲಿ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಜಿಲ್ಲೆಯ ಶಹಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಗೂಗಿ ಗ್ರಾಮದ ಯುವತಿ ಮೇಲೆ ಆಕೆಯ ದೊಡ್ಡಪ್ಪನ ಮಗನೇ ಅತ್ಯಾಚಾರ ನಡೆಸಿದ್ದಾನೆ. ಹಣ್ಣು ತರಲು ತೋಟಕ್ಕೆ ಹೋಗೋಣ ಎಂದು ಕರೆದೊಯ್ದ ಆರೋಪಿ, ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸಂತ್ರಸ್ತ ಯುವತಿ ದೂರು ನೀಡಿದ್ದಾರೆ.

ತನ್ನ ಅಣ್ಣ ಸೀತಾಫಲ ಹಣ್ಣು ತರಲು ಹೋಗೋಣ ಎಂದು ಕರೆದುಕೊಂಡು ಹೋಗಿ ತನ್ನ ಮೇಲೆ ಅತ್ಯಾಚಾರ ಎಸಗಿದ. ಮಾತ್ರವಲ್ಲದೆ, ಯಾರಿಗೂ ಹೇಳಬಾರದು ಎಂದು ಜೀವ ಬೆದರಿಕೆಯನ್ನೂ ಒಡ್ಡಿದ್ದಾನೆ ಎಂದು ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಶಹಾಪುರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಪಕ್ಷ ಮಾತ್ರವೇ ಜೆಡಿಎಸ್‌ ಪಕ್ಷಕ್ಕೆ ಟಾರ್ಗೇಟ್, ಬಿಜೆಪಿಯಲ್ಲ: ಸಿದ್ದರಾಮಯ್ಯ

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights