IPL 2021: ಹೈದರಾಬಾದ್ ವಿರುದ್ದ ಮುಂಬೈ ಜಯ; ಅದರೂ ಫ್ಲೇ ಆಫ್‌ಗಿಲ್ಲ ಎಂಟ್ರಿ!

ಅಬುದಾಬಿಯ ಶೇಖ್ ಜಾಯೆದ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಶುಕ್ರವಾರದ ಸನ್ ರೈಸರ್ಸ್ ಹೈದ್ರಾಬಾದ್ ಮತ್ತು ಮುಂಬೈ ಇಂಡಿಯನ್ಸ್ ನಡುವೆ ಹಣಾಹಣಿ ನಡೆದಿದ್ದು, ಹೈದರಾಬಾದ್ ತಂಡ ಸೋಲು ಕಂಡಿದೆ.

ಹೈದರಾಬಾದ್ ವಿರುದ್ಧ ಮುಂಬೈ ತಂಡ 42 ರನ್ ಗಳ ಅಂತರದಿಂದ ಗೆಲುವು ದಾಖಲಿಸಿದೆ. ಆದರೂ, ಮುಂಬೈ ತಂಡ ಪ್ಲೇ ಆಫ್ ಹಂತ ಪ್ರವೇಶಿಸುವಲ್ಲಿ ವಿಫಲವಾಗಿದೆ.

ಅತ್ತ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಅಂತಿಮ ನಾಲ್ಕರ ಘಟ್ಟಕ್ಕೆ ಲಗ್ಗೆ ಯಿಟ್ಟಿದೆ.

ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡ ಪರ ಇಶಾನ್ ಕಿಶನ್ 84, ಸೂರ್ಯಕುಮಾರ್ ಯಾದವ್ 82, ನಾಯಕ ರೋಹಿತ್ ಶರ್ಮಾ 18 ರನ್ ಗಳ ನೆರವಿನೊಂದಿಗೆ ನಿಗದಿತ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ ಬೃಹತ್ 235 ರನ್ ಗಳಿಸಿತು.

ಈ ಗುರಿ ಬೆನ್ನತ್ತಿದ್ದ ಸನ್ ರೈಸರ್ಸ್ ಹೈದ್ರಾಬಾದ್ ಪರ ಮನೀಶ್ ಪಾಂಡೆ 69, ಜೇಸನ್ ರಾಯ್ 34, ಅಭಿಷೇಕ್ ಶರ್ಮಾ ಅವರ 33 ರನ್ ಗಳ ನೆರವಿನೊಂದಿಗೆ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 193 ರನ್ ಗಳಿಸಷ್ಟೇ ಶಕ್ತವಾಯಿತು. ಇದರೊಂದಿಗೆ 42 ರನ್ ಗಳ ಅಂತರದೊಂದಿಗೆ ಹೈದ್ರಾಬಾದ್ ವಿರುದ್ಧ ಮುಂಬೈ ಇಂಡಿಯನ್ಸ್ ಗೆಲುವು ಸಾಧಿಸಿತು. ಇಶಾನ್ ಕಿಶನ್ ಪಂದ್ಯ ಶ್ರೇಷ್ಟ ಆಟಗಾರ ಪ್ರಶಸ್ತಿಗೆ ಭಾಜನರಾದರು.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights